ಮೈಸೂರು :
ಅತಿವೇಗವಾಗಿ ಚಲಿಸುತಿದ್ದ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಗುದ್ದಿ, ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಇಲ್ಲಿನ ಬೋಗಾದಿ ಜಂಕ್ಷನ್ ಬಳಿ ನಡೆದಿದೆ.
ಚನ್ನಪಟ್ಟಣ ನಿವಾಸಿ ಅರುಣ್ ಕುಮಾರ್(23) ಸ್ಥಳದಲ್ಲೇ ಮೃತ ಚಾಲಕ. ಕಾರು ಕುಕ್ಕರಹಳ್ಳಿ ಕೆರೆಯ ಬಳಿಯಿಂದ ಬೋಗಾದಿ ಜಂಕ್ಷನ್ ಕಡೆ ಅತಿವೇಗವಾಗಿ ಚಲಿಸುತ್ತಿತ್ತು ಎನ್ನಲಾಗಿದೆ.
ಅಕ್ಟೋಬರ್ 28ರ ಮಧ್ಯರಾತ್ರಿ 12ರ ಸುಮಾರಿಗೆ ಘಟನೆ ನಡೆದಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೆ.ಆರ್.ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು, ಅಗ್ನಿಶಾಮಕ ಠಾಣೆಯ ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿ ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.
ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಕಾರಿನಲ್ಲಿ ಪ್ರಯಾಣಿಸುತಿದ್ದ ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಈ ಸಂಬಂಧ ಕೆ.ಆರ್.ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
