ಮೈಸೂರು :
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಐದು ದಿನಗಳ ಕಾಲ ಚಾಮುಂಡಿಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ.
ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿರುವ ಬೆನ್ನಲ್ಲೇ ಮೈಸೂರು ಜಿಲ್ಲೆಯಲ್ಲೂ ಆತಂಕ ಹೆಚ್ಚಾಗಿದೆ. ನಿನ್ನೆ ಒಂದೇ ದಿನ 52 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 639ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಬಿಗಿಗೊಳಿಸಿದೆ.
ಇಂದಿನಿಂದ ಐದು ದಿನಗಳ ಕಾಲ ಚಾಮುಂಡಿಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ. ಇದೇ ವೇಳೆ ಐತಿಹಾಸಿಕ ಅರಮನೆಗೂ ಕೊರೊನಾ ಭೀತಿ ತಟ್ಟಿದ್ದು, ಮೂರು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶ ನಿರ್ಬಂದಿಸಲಾಗಿದೆ.
ಅರಮನೆಯಲ್ಲಿ ಒಂಟೆ ನೋಡಿಕೊಳ್ಳುವ ವ್ಯಕ್ತಿಯ ಮಗನಿಗೆ ಕೊರೊನಾ ಸೋಂಕು ಬಂದಿದೆ. ಹೀಗಾಗಿ ಮೂರು ದಿನ ಅರಮನೆಯನ್ನು ಬಂದ್ ಮಾಡಲಾಗಿದೆ. ಇಂದು ಅರಮನೆ ಆವರಣದಲ್ಲಿ ಸ್ಯಾನಿಟೈಸ್ ಮಾಡಲು ಸಿದ್ಧತೆ ಮಾಡಲಾಗಿದೆ. ಶನಿವಾರ ಮತ್ತು ಭಾನುವಾರ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/06/Chamundi-betta.jpg)