ಮಾಧ್ಯಮಗಳಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ

ಮೈಸೂರು:

      ಕಳೆದ ದಸರಾಗಳಿಗಿಂತ ಈ ದಸರಾ ವಿಭಿನ್ನವಾಗಿದೆ. ದಸರಾದ ಎಲ್ಲ ಕಾರ್ಯಕ್ರಮಗಳನ್ನು ಜನ ಸ್ವೀಕರಿಸಿದ್ದಾರೆ. ಇದರಲ್ಲಿ ಮಾಧ್ಯಮಗಳ ಪಾತ್ರ ಬಹಳ ದೊಡ್ಡದಿದೆ ಎಂದು ಮಾಧ್ಯಮಗಳಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೃತಜ್ಞತೆ ಸಲ್ಲಿಸಿದ್ದಾರೆ.

      ಲಲಿತಾ ಮಹಲ್​ನಲ್ಲಿ ಸಭೆ ನಡೆಸಿ ಮಾತನಾಡಿದ ಹೆಚ್​​.ಡಿ ಕುಮಾರಸ್ವಾಮಿ, ಮೈಸೂರು ಅರಮನೆಯಿಂದ ಇಂದು ನಮಗೆ ಸಿಗಬೇಕಾದ ಎಲ್ಲಾ ಸಹಕಾರ ಸಿಗುತ್ತಿದೆ. ದಸರಾ ಉದ್ಘಾಟನೆಯಿಂದ ಇಲ್ಲಿಯವರೆಗೂ ಮಾಧ್ಯಮದವರು ಅವಿರತವಾಗಿ ಶ್ರಮಿಸಿದ್ದಾರೆ. ಮಾಧ್ಯಮಗಳಿಂದ ಲಕ್ಷಾಂತರ ಮಂದಿ ಪ್ರವಾಸಿಗರು ಮೈಸೂರಿಗೆ ಬರುವಂತಾಯಿತು ಎಂದು ತಿಳಿಸಿದ್ದಾರೆ. 

      ದಸರಾ ಸಂದರ್ಭದಲ್ಲಿ ಬಿಟ್ಟು ಬೇರೆ ಸಂದರ್ಭದಲ್ಲಿ ಪ್ರವಾಸೋದ್ಯಮಕ್ಕೆ ಒತ್ತು ನೀಡುತ್ತೇವೆ. ಆ ಮೂಲಕ ಹಲವು ಜನರಿಗೆ ಉದ್ಯೋಗ ನೀಡುವ ಪ್ರಯತ್ನ ಮಾಡುತ್ತೇವೆ. ಇದಕ್ಕಾಗಿ ಬ್ಲೂ ಪ್ರಿಂಟ್ ಸಿದ್ಧಪಡಿಸಲು ಹೇಳಿದ್ದೇನೆ. ಪ್ರವಾಸೋದ್ಯಮ ಸಚಿವರು ಸ್ವಯಂ ಆಸಕ್ತಿ ವಹಿಸಿ ಕೆಲಸ ಮಾಡುತ್ತಿದ್ದಾರೆ ಎಂದರು.

ಸಿಎಂ ಸಂತಾಪ:

      ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಾಯಿ ನಿಧನರಾಗಿರುವುದಕ್ಕೆ ಸಂತಾಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ರಾಜಮನೆತನಕ್ಕೆ ಸೇರಿದ ಅತ್ಯಂತ ಹಿರಿಯರೊಬ್ಬರು ವಯೋಸಹಜ ಕಾರಣಗಳಿಂದ ಮೃತಪಟ್ಟಿದ್ದಾರೆ. ರಾಜವಂಶಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಹೇಳಿದರು. 

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap