ಮೈಸೂರು ದಸರಾ 2018 : ಇಂದಿನ ಕಾರ್ಯಕ್ರಮಗಳ ವೇಳಾಪಟ್ಟಿ

ಮೈಸೂರು:

      ನಾಡಹಬ್ಬ ಮೈಸೂರು ದಸರಾ-2018 ಇಂದಿನ( ಅಕ್ಟೋಬರ್ 10) ವಿವಿಧ ಕಾರ್ಯಕ್ರಮಗಳ ವಿವರ ಇಂತಿದೆ.

      ಬೆಳಗ್ಗೆ 9 ಗಂಟೆಗೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೊಲೀಸ್ ಸಹಾಯ ಕೇಂದ್ರ (ಕಿಯಾಸ್ಕ್) ಕಾರ್ಯಕ್ರಮವನ್ನು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಉದ್ಘಾಟಿಸುವರು.

      9-30ಕ್ಕೆ ದಸರಾ ಕ್ರೀಡಾಜ್ಯೋತಿಯನ್ನು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಉದ್ಘಾಟಿಸುವರು. 11-30ಕ್ಕೆ ಕರ್ನಾಟಕ ಕಲಾಮಂದಿರದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೈಸೂರು ದಸರಾ ಚಲನಚಿತ್ರೋತ್ಸವನ್ನು ಉದ್ಘಾಟಿಸುವರು.

      ಮಧ್ಯಾಹ್ನ 2 ಗಂಟೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ ಹಾಗೂ ಲಲಿತ ಮಹಲ್ ಪಕ್ಕದ ಮುಡಾ ಮೈದಾನದಲ್ಲಿ ಆಹಾರ ನಾಗರೀಕ ಸರಬರಾಜು ಸಚಿವ ಜಮೀರ್ ಅಹಮ್ಮದ್ ಖಾನ್ ಆಹಾರ ಮೇಳಕ್ಕೆ ಚಾಲನೆ ನೀಡುವರು.

      ಮಧ್ಯಾಹ್ನ 3-30ಕ್ಕೆ ದೇವರಾಜ ಅರಸು ವಿವಿದೋದ್ದೇಶ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದಸರಾ ಕುಸ್ತಿ ಪಂದ್ಯಾವಳಿ ಉದ್ಘಾಟಿಸುವರು.

      4 ಗಂಟೆಗೆ ಕಾಡಾ ಕಚೇರಿ ಮೈದಾನದಲ್ಲಿ ಪುಸ್ತಕ ಮಳಿಗೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಡಾ. ಜಯಮಾಲ ಉದ್ಘಾಟಿಸುವರು.

      4 ಗಂಟೆಗೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ರಾಜ್ಯ ದಸರಾ ಕ್ರೀಡಾಕೂಟವನ್ನು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಉದ್ಘಾಟಿಸುವರು.

      4-30ಕ್ಕೆ ಕುಪ್ಪಣ್ಣ ಪಾರ್ಕ್ ನಲ್ಲಿ ಗಾಜಿನ ಮನೆ ಲೋಕಾರ್ಪಣೆಯನ್ನು ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್ ನೆರವೇರಿಸುವರು.

       4-30ಕ್ಕೆ ದಸರಾ ವಸ್ತುಪ್ರದರ್ಶನ ಆವರಣದಲ್ಲಿ ವಸ್ತುಪ್ರದರ್ಶನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡುವರು.

      4-45ಕ್ಕೆ ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ವಾರ್ತಾ ಇಲಾಖೆ ವಸ್ತು ಪ್ರದರ್ಶನವನ್ನು ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ಉದ್ಘಾಟಿಸುವರು.

      4-45ಕ್ಕೆ ಕುಪ್ಪಣ್ಣ ಪಾರ್ಕ್ ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಸಚಿವರಾದ ಎಂ.ಸಿ. ಮನಗೂಳಿ ಚಾಲನೆ ನೀಡುವರು.

      6-15ಕ್ಕೆ ಹಸಿರು ಮಂಟಪ, ಸಯ್ಯಾಜಿರಾವ್ ರಸ್ತೆಯಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಲೋಕೋಪಯೋಗಿ ಸಚಿವರಾದ ಹೆಚ್.ಡಿ. ರೇವಣ್ಣ ಚಾಲನೆ ನೀಡುವರು.

      6 ಗಂಟೆಗೆ ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಸಮಾರಂಭದ ಉದ್ಘಾಟನೆಯನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೆರವೇರಿಸುವರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap