ಮಾಜಿ ಸಚಿವ ಸಾ.ರಾ.ಮಹೇಶ್ ಕ್ವಾರಂಟೈನ್!

ಮೈಸೂರು :

     ಮಾಜಿ ಸಚಿವ ಹಾಗೂ ಹಾಲಿ ಶಾಸಕ ಮಾಜಿ ಸಚಿವ ಸಾ.ರಾ ಮಹೇಶ್ ಮೈಸೂರಿನಲ್ಲಿ ಕ್ವಾರಂಟೈನ್ ಮಾಡಲಾಗಿದೆ.

      ರಾಜ್ಯದ್ಯಂತ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ, ಮೈಸೂರು ಜಿಲ್ಲೆಯಲ್ಲೂ ಮಾರಕ ಸೋಂಕು ತಲ್ಲಣ ಸೃಷ್ಟಿಸಿದೆ. ನಿನ್ನೆ ಒಂದೇ ದಿನ ಮೈಸೂರಿನಲ್ಲಿ 25 ಮಂದಿಯಲ್ಲಿ ಸೋಂಕು ಪಾಸಿಟಿವ್ ಬಂದಿದೆ. ಏತನ್ಮಧ್ಯೆ, ಮಾಜಿ ಸಚಿವ ಸಾ.ರಾ.ಮಹೇಶ್ ಅವರನ್ನು ಕ್ವಾರಂಟೈನ್ ಮಾಡಲಾಗಿದೆ.

      ಕಳೆದ ಎರಡು ದಿನಗಳ ಹಿಂದೆ ಮಾಜಿ ಸಚಿವ ಸಾ.ರಾ ಮಹೇಶ್ ಅವರು ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದ ಸೀಲ್‍ಡೌನ್ ಪ್ರದೇಶಗಳಿಗೆ ಭೇಟಿ ನೀಡಿದ್ದರು. ಬ್ರಾಹ್ಮಣರ ಬೀದಿ ಮತ್ತು ಕೋಟೆ ಬೀದಿಗಳಲ್ಲಿನ 150ಕ್ಕೂ ಹೆಚ್ಚು ಕುಟುಂಬದವರಿಗೆ ಅಗತ್ಯ ವಸ್ತುಗಳು ಹಾಗೂ ಪಡಿತರ ದಿನಸಿ ಪದಾರ್ಥ ಔಷಧಿಗಳನ್ನು ವಿತರಿಸಿದ್ದರು. ಇದಾದ ಬೆನ್ನಲ್ಲೇ ಮಹಿಳಾ ತಹಶೀಲ್ದಾರರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಸಾ.ರಾ ಮಹೇಶ್‍ಗೆ ಸೋಂಕಿನ ಆತಂಕ ಎದುರಾಗಿದ್ದು, ಅವರನ್ನು ಕ್ವಾರಂಟೈನ್ ಮಾಡಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link