ಮೈಸೂರು ದಸರಾ 2018 : ಇಂದಿನ ಕಾರ್ಯಕ್ರಮಗಳ ವೇಳಾಪಟ್ಟಿ

0
48

ಮೈಸೂರು:

      ನಾಡಹಬ್ಬ ಮೈಸೂರು ದಸರಾ-2018 ಇಂದಿನ( ಅಕ್ಟೋಬರ್ 12) ವಿವಿಧ ಕಾರ್ಯಕ್ರಮಗಳ ವಿವರ ಇಂತಿದೆ.

      ಬೆಳಗ್ಗೆ 6.00 ಗಂಟೆಗೆ ಕುವೆಂಪು ನಗರದ ಸೌಗಂಧಿಕ ಉದ್ಯಾನವನದಲ್ಲಿ ‘ಯೋಗ ದಸರಾ’ ಕಾರ್ಯಕ್ರಮ, 7-30ಕ್ಕೆ ಪುರಭವನ ಟೌನ್ ಹಾಲ್ ನಿಂದ ಪಾರಂಪರಿಕ ಸೈಕಲ್ ಸವಾರಿ, 9-30ಕ್ಕೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ರೈತ ದಸರಾ ಮೆರವಣಿಗೆ, 10-00 ಗಂಟೆಗೆ ಕೃಷ್ಣಮೂರ್ತಿಪುರಂನಲ್ಲಿರುವ ಶಾರದಾ ವಿಲಾಸ ಶತಮಾನೋತ್ಸವ ಭವನದಲ್ಲಿ ಮಕ್ಕಳ ದಸರಾ ಕಾರ್ಯಕ್ರಮವಿದೆ.

       10.00 ಗಂಟೆಗೆ ಬಹದ್ದೂರ್ ಸಭಾಂಗಣದಲ್ಲಿ ಕವಿಗೋಷ್ಠಿ, 10.30 ಕ್ಕೆ ಜೆ.ಕೆ. ಮೈದಾನದಲ್ಲಿ ಕೃಷಿ ವಸ್ತುಪ್ರದರ್ಶನ ಹಾಗೂ ರೈತ ದಸರಾ, 10-30ಕ್ಕೆ ಜೆ.ಕೆ. ಮೈದಾನದಲ್ಲಿ ಚಿಣ್ಣರ ದಸರಾ, 10-45ಕ್ಕೆ ಜೆ.ಕೆ. ಮೈದಾನದಲ್ಲಿ ಮತ್ಸ್ಯಮೇಳ ಕಾರ್ಯಕ್ರಮವಿರುತ್ತದೆ.

      ಸಂಜೆ 6 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಯುವದಸರಾವನ್ನು ಉನ್ನತ ಶಿಕ್ಷಣ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಟಿ. ದೇವೇಗೌಡ ಉದ್ಘಾಟಿಸುವರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

LEAVE A REPLY

Please enter your comment!
Please enter your name here