ಬೆಂಗಳೂರು:
ಒಂಟಿತನದಿಂದ ಬೇಸತ್ತ ಪತ್ರಿಕೋದ್ಯಮ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಕೊತ್ತನೂರಿನ ಕೆ ನಾರಾಯಣಪುರ ಬಳಿಯ ಖಾಸಗಿ ಕಾಲೇಜಿನ ಹಾಸ್ಟೆಲ್‍ನಲ್ಲಿ ನಡೆದಿದೆ.
ಮುಂಬೈ ಮೂಲದ ಸೋಫಿಯಾ ದಮನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ವಿದ್ಯಾರ್ಥಿನಿ. ನಗರದ ಖಾಸಗಿ ಕಾಲೇಜಿನಲ್ಲಿ 4ನೇ ಸೆಮಿಸ್ಟರ್ ಓದುತ್ತಿದ್ದ ವಿದ್ಯಾರ್ಥಿನಿ ಸೋಫಿಯಾ ಶವ ಹಾಸ್ಟೆಲಿನ ಕೋಣೆಯ ಬೆಡ್ ಮೇಲೆ ಬುಧವಾರ ಸಂಜೆ ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಈಕೆ ಕಳೆದ ಒಂದು ವರ್ಷದಿಂದ ಬೆಂಗಳೂರಿನಲ್ಲಿ ನೆಲೆಸಿದ್ದಳು. ನಿನ್ನೆ ಬೆಳಗ್ಗೆ ಸಹಪಾಠಿಗಳ ಜೊತೆ ಮಾತಾನಾಡಿದ್ದ ಸೋಫಿಯಾ, ”ನೀವು ಕಾಲೇಜಿಗೆ ಹೋಗಿ, ನಾನು ಬರೋದಿಲ್ಲ” ಎಂದಿದ್ದಳಂತೆ. ಸಂಜೆ ಸಹಪಾಠಿಗಳು ಹಾಸ್ಟೆಲ್ಗೆ ವಾಪಸ್ ಬಂದಾಗ ಹಾಸ್ಟೆಲ್ನ ತನ್ನ ಕೋಣೆಯ ಬೆಡ್ ಮೇಲೆ ಮಲಗಿದ್ದ ಸ್ಥಿತಿಯಲ್ಲಿ ಮೃತಪಟ್ಟಿದ್ದಾಳೆ.
ಡೆತ್ ನೋಟ್:
“ನನ್ನ ಆತ್ಮಹತ್ಯೆಗೆ ಒಂಟಿತನ ಕಾರಣ. ನನ್ನ ತಂದೆ- ತಾಯಿ ದುಬೈನಲ್ಲಿ ವಾಸಿಸುತ್ತಿದ್ದಾರೆ. ನನಗೆ ಹಣ ಕಳುಹಿಸುತ್ತಿದ್ದ ಅಪ್ಪ- ಅಮ್ಮ ಇದೂವರೆಗೂ ನೀನು ಹೇಗಿದ್ದೀಯಾ ಎಂದು ನನ್ನನ್ನು ವಿಚಾರಿಸುತ್ತಿರಲಿಲ್ಲ. ನನಗೆ ಅಪ್ಪ-ಅಮ್ಮನ ಪ್ರೀತಿ ಇಲ್ಲದಂತಾಗಿದೆ. ನಾನು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದೇನೆ.”
ನನ್ನ ಸಾವಿಗೆ ನಾನೇ ಕಾರಣ ಎಂದು ಸೋಫಿಯಾ ಬರೆದಿದ್ದಾಳೆ.
ಮುಂಬೈಯಿಂದ ಸೋಫಿಯಾ ಪೋಷಕರು ಬರಬೇಕಿದೆ. ಈ ಸಾವು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಡಿದೆ. ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ್ ಆಸ್ಪತ್ರೆಗೆ ರವಾನನಿಸಲಾಗಿದೆ.
ಅನುಮಾನಾಸ್ಪದವಾಗಿ ಸೋಫಿಯಾ ಮೃತಪಟ್ಟ ಹಿನ್ನೆಲೆಯಲ್ಲಿ ದೂರು ನೀಡಲಾಗಿದ್ದು, ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 74(ಅಸಹಜ ಸಾವು) ಅಡಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ