ಮೈಸೂರು-ಮಡಿಕೇರಿ ಸಂಚಾರ ಮಾರ್ಗ ಬಂದ್!!

ಮಡಿಕೇರಿ:

      ಕುಶಾಲನಗರದ ಕೊಪ್ಪ ಸೇತುವೆ ಮೇಲೆ ಕಾವೇರಿ ನದಿ ನೀರು ತುಂಬಿ ಹರಿಯುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಮಡಿಕೇರಿ-ಕುಶಾಲನಗರ-ಮೈಸೂರು ಮಾರ್ಗದಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ.

      ಕೊಡಗಿನ ದಕ್ಷಿಣ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ನದಿ ನೀರಿನ ಮಟ್ಟ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಲೇ ಇದೆ. ಜಿಲ್ಲೆಯ 14 ಕಡೆಗಳಲ್ಲಿ ಭೂಕುಸಿತ ಮತ್ತು ಪ್ರವಾಹದಿಂದಾಗಿ ಸಾರಿಗೆ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಸುರಕ್ಷತೆ ದೃಷ್ಟಿಯಿಂದ ಮೈಸೂರು-ಮಡಿಕೇರಿ ಮಾರ್ಗವನ್ನು ಬಂದ್ ಮಾಡಲಾಗಿದೆ.

      ಕೊಡಗು ಜಿಲ್ಲೆಯಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದ ಜಿಲ್ಲೆಯ 58 ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.15 ಪ್ರದೇಶಗಳಲ್ಲಿ ಭೂ ಕುಸಿತದಿಂದ ರಸ್ತೆ ಸಂಪರ್ಕ ಕಡಿತಗೊಂಡಿದೆ. ಜಿಲ್ಲೆಯಲ್ಲಿ ಒಟ್ಟಾಗಿ 34 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 817 ಕುಟುಂಬಗಳ ಒಟ್ಟು 2866 ಸಂತ್ರಸ್ಥರು ಆಶ್ರಯ ಪಡೆದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 247 ಜನರನ್ನು ಮತ್ತು 11 ಜಾನುವಾರಗಳನ್ನು ರಕ್ಷಿಸಲಾಗಿದೆ. ಆದರೆ ಮಳೆ ಮುಂದುವರೆಯುತ್ತಲೇ ಇದೆ. ಪರಿಸ್ಥಿತಿಯನ್ನು ಹತೋಟಿಯಲ್ಲಿಡಲು ಕೆಲವೆಡೆ ಪ್ರಯತ್ನಗಳು ಮುಂದುವರೆದಿವೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap