ಮೈಸೂರು :
ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಆರೋಗ್ಯದಲ್ಲಿ ಕೊಂಚ ಚೇತರಿಕೆಕಂಡು ಬಂದಿದೆ ಎಂದು ಕೊಲಂಬಿಯಾ ಏಷ್ಯಾ ಆಸ್ಪತ್ರೆಯ ಮೂಲಗಳು ತಿಳಿಸಿದೆ.
ಭಾನುವಾರ ರಾತ್ರಿ ಮೈಸೂರಿನ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಬನ್ನಿ ಮಂಟಪ ಸಮೀಪದ ಪಾರ್ಟಿ ಹಾಲಿಗೆ ತಮ್ಮ ಆತ್ಮೀಯ ಮಗನ ಮದುವೆಯ ಬೀಗರೂಟಕ್ಕೆ ಆಗಮಿಸಿದ್ದರು. ಈ ವೇಳೆ ಯುವಕ ಫರಾನ್ (24) ಚಾಕುವಿನಿಂದ ಹಲ್ಲೆ ಮಾಡಿದ್ದ. ನಂತರ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಸೇಠ್ ಅವರನ್ನು ಕೊಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರನ್ನು ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದಾಗೆ ಆಸ್ಪತ್ರೆ ಮೂಲಕಗಳಿಂದ ತಿಳಿದು ಬಂದಿದೆ.
ತನ್ವೀರ್ ಸೇಠ್ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಇದೀಗ ಸ್ಕ್ಯಾನಿಂಗ್ ಕೂಡ ಮಾಡಲಾಗಿದೆ. ಸ್ಕ್ಯಾನಿಂಗ್ ವ ವರದಿಯಿಂದ ಆತಂಕ ಕೊಂಚ ನಿವಾರಣೆಯಾಗಿದೆ.. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಸ್ಪೈನಲ್ ‘ಕಾರ್ಡ್ ಗೆ ಹಾನಿಯಾಗಿಲ್ಲ ಎಂಬುದು ಸ್ಕ್ಯಾನಿಂಗ್ ವರದಿಯಲ್ಲಿ ತಿಳಿದು ಬಂದಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
