ಸಚಿವ ಸ್ಥಾನಕ್ಕೆ ನಾಗೇಶ್ ರಾಜೀನಾಮೆ!!

ಬೆಂಗಳೂರು:

      ಕಳೆದ ತಿಂಗಳು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ಪಕ್ಷೇತರ ಶಾಸಕ ಎಚ್. ನಾಗೇಶ್ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

      ಇಂದು ಬೆಳಗ್ಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ನಿವಾಸದಲ್ಲಿನ ಸಚಿವರ ಉಪಹಾರ ಕೂಟಕ್ಕೆ ಆಗಮಿಸುವ ಬದಲಿಗೆ ಅವರು ರಾಜಭವನಕ್ಕೆ ತೆರಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವ ನಾಗೇಶ್ ಡಿ.ಕೆ. ಶಿವಕುಮಾರ್ ಅವರ ಆಪ್ತರಾಗಿದ್ದಾರೆ.

     ಇಬ್ಬರು ಪಕ್ಷೇತರ ಶಾಸಕರಾದ ಮುಳಬಾಗಿಲಿನ ಎಚ್. ನಾಗೇಶ್ ಮತ್ತು ರಾಣೆಬೆನ್ನೂರಿನ ಆರ್.ಶಂಕರ್ ಅವರನ್ನು ಸರ್ಕಾರ ಉಳಿಸಿಕೊಳ್ಳುವ ಕಸರತ್ತಿಗಾಗಿ 21 ದಿನಗಳ ಹಿಂದಷ್ಟೇ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿತ್ತು.  

      ಎಚ್. ನಾಗೇಶ್ ಜೂನ್ 14ರಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ನಾಗೇಶ್ ಅವರಿನ್ನು ಜೆಡಿಎಸ್ ಕೋಟಾದಲ್ಲಿ ಸಣ್ಣ ಕೈಗಾರಿಕೆಗಳ ಸಚಿವ ಸ್ಥಾನವನ್ನು ನೀಡಲಾಗಿತ್ತು. ನಾಗೇಶ್ ರಾಜೀನಾಮೆಯಿಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರಕಾರಕ್ಕೆ ತಲೆನೋವು ತಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap