ಚಿಕ್ಕಬಳ್ಳಾಪುರ:
ಕೊರೋನಾ ಭೀತಿ ಹಿನ್ನೆಲೆ ಇಂದಿನಿಂದ 10 ದಿನಗಳ ಕಾಲ ನಂದಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧವನ್ನು ಹೇರಲಾಗಿದೆ.
ವಿಶ್ವದಾದ್ಯಂತ ಆವರಿಸಿರುವ ಕೊರೊನಾ ವೈರಸ್ ಭೀತಿಯಿಂದಾಗಿ ಮಾರ್ಚ್ 14 ರಿಂದ ಮಾ.23ರ ಬೆಳಗ್ಗೆ 8 ಗಂಟೆಯವರೆಗೆ ಪ್ರವೇಶ ನಿಷೇಧಿಸಲಾಗಿದೆ.
ಜಿಲ್ಲೆಯ ಇತರೆ ಪ್ರವಾಸಿ ತಾಣ, ಜಾತ್ರೆ, ರಥೋತ್ಸವ, ಚಿತ್ರಮಂದಿರ, ಉದ್ಯಾನವನಕ್ಕೂ ಕೂಡಾ ಪ್ರವೇಶ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಆದೇಶ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ