ಬೆಂಗಳೂರು :
ದಿನಬಳಕೆಯ ಈರುಳ್ಳಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಗ್ರಾಹಕರಿಗೆ ಹೊಸವರ್ಷಕ್ಕೆ ಮತ್ತೊಂದು ಶಾಕ್ ಎದುರಾಗಲಿದೆ.
ಕಳೆದ ಮೂರು ವರ್ಷಗಳಿಂದ ಹಾಲಿನ ದರವನ್ನು ಏರಿಕೆ ಮಾಡಿಲ್ಲ. ಹೀಗಾಗಿ ಹಾಲಿನ ದರ ಏರಿಕೆ ಮಾಡುವಂತೆ ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಗ್ರಾಹಕರಿಗೆ ಬಿಗ್ ಶಾಕ್ ಕಾದಿದ್ದು, ಸದ್ಯದಲ್ಲೇ ಹಾಲಿನ ದರ ಪ್ರತಿ ಲೀಟರ್ ಗೆ ರೂ.3 ಏರಿಕೆ ಆಗುವ ಸಾಧ್ಯತೆ ಇದೆ.
ಈಗಾಗಲೇ ವಿವಿಧ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಇತ್ತೀಚಿಗೆ ಈರುಳ್ಳಿ ಬೆಲೆ ಕಣ್ಣೀರು ತರಿಸಿತ್ತು. ಇದರ ಬೆನ್ನಲ್ಲೇ ಇದೀಗ ಹಾಲಿನ ದರ ಏರಿಕೆಯ ಬಿಸಿ ಗ್ರಾಹಕರನ್ನು ತಟ್ಟಲಿದೆ. ಅದೂ ಪ್ರತಿ ಲೀಟರ್ ಗೆ ರೂ.3 ಏರಿಕೆಯ ಬಿಸಿ ಆಗಿದೆ.
ಈ ಕುರಿತಂತೆ ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ನರಸಿಂಹಮೂರ್ತಿ ಪಶು ಸಂಗೋಪನೆ, ಸಹಕಾರ ಇಲಾಖೆ ಮತ್ತು ಕೆಎಂಎಫ್ ಹಾಗೂ ಸರ್ಕಾರಕ್ಕೆ ಪತ್ರ ಬರೆದಿದ್ದು, ಕಳೆದ ಮೂರು ವರ್ಷಗಳಿಂದ ಸರ್ಕಾರವು ಹಾಲಿನ ಬೆಲೆ ಏರಿಕೆ ಮಾಡಿಲ್ಲ. ಹೀಗಾಗಿ ಪ್ರತಿ ಲೀಟರ್ ಮೇಲೆ ಕನಿಷ್ಠ 3 ರೂಪಾಯಿ ಏರಿಕೆ ಮಾಡುವಂತೆ ಮನವಿ ಮಾಡಿದ್ದಾರೆ. ಹೀಗಾಗಿ ಸದ್ಯದಲ್ಲಿಯೇ ಹಾಲಿನ ದರ ಏರಿಕೆ ಆಗುವ ಸಾಧ್ಯತೆ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ