ಆಪರೇಷನ್ ಕಮಲದ ಹಿಂದಿರುವುದು ಪ್ರಧಾನಿ ನರೇಂದ್ರ ಮೋದಿಯಲ್ಲ, ಬದಲಾಗಿ ಮಾಜಿ ಸಿಎಂ ಯಡಿಯೂರಪ್ಪ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಆರೋಪಿಸಿದ್ದಾರೆ.
ಬೆಂಗಳೂರಿನ ಪದ್ಮನಾಭನಗರ ನಿವಾಸದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭೇಟಿಯ ನಂತರ ಮಾತನಾಡಿದ ದೇವೇಗೌಡರು,”ಮೂರು ದಿನದ ಮಟ್ಟಿಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತ ಕಾರಣ ಬಿ.ಎಸ್. ಯಡಿಯೂರಪ್ಪ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಶಾಸಕರನ್ನು ಖರೀದಿಸಲು ಯತ್ನಿಸುತ್ತಿದ್ದಾರೆ. ಈ ಆಪರೇಷನ್ ಯತ್ನದ ಹಿಂದೆ ಕೇಂದ್ರದ ಯಾವೊಬ್ಬ ನಾಯಕರೂ ಇಲ್ಲ. ಯಡಿಯೂರಪ್ಪ ಅವರೇ ಅಧಿಕಾರ ವ್ಯಾಮೋಹಕ್ಕೆ ಬಿದ್ದು ಈ ರೀತಿ ಮಾಡುತ್ತಿದ್ಧಾರೆ,” ಎಂದು ಎಚ್.ಡಿ. ದೇವೇಗೌಡ ಹೇಳಿದ್ದಾರೆ.