ಬೆಂಗಳೂರು:
ವೈದ್ಯಕೀಯ ಮತ್ತು ದಂತ ವೈದ್ಯ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸುವ ‘ರಾಷ್ಟ್ರೀಯ ಅರ್ಹತಾ-ಪ್ರವೇಶ ಪರೀಕ್ಷೆ (ನೀಟ್) ರಾಜ್ಯಾದ್ಯಂತ ಭಾನುವಾರ ಮಧ್ಯಾಹ್ನ 2 ರಿಂದ 5 ಗಂಟೆವರೆಗೆ ನಡೆಯಲಿದೆ.
ರಾಷ್ಟ್ರಾದ್ಯಂತ ಮಧ್ಯಾಹ್ನ 2ರಿಂದ ಸಂಜೆ 5 ಗಂಟೆಯ ತನಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯದಲ್ಲಿ ಬೆಂಗಳೂರು, ಮೈಸೂರು, ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ದಾವಣಗೆರೆ, ಮಂಗಳೂರು, ಉಡುಪಿಯ ಪರೀಕ್ಷಾ ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ಇದೆ.
ಮಧ್ಯಾಹ್ನ 12 ಗಂಟೆಯ ವೇಳೆಗೆ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಹಾಜರಿರುವಂತೆ ಸೂಚಿಸಿದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಪ್ರವೇಶ ಪತ್ರಗಳನ್ನು ತೆಗೆದುಕೊಂಡು ಹೋಗಬೇಕು. ಜೊತೆಗೆ, ವಿದ್ಯಾರ್ಥಿಗಳ ಭಾವಚಿತ್ರವುಳ್ಳ ಪಾನ್ ಕಾರ್ಡ್, ಚಾಲನಾ ಪರವಾನಗಿ, ಪಾಸ್‌ಪೊರ್ಟ್, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್ ಸೇರಿದಂತೆ ಇತರೆ ಗುರುತಿನ ಚೀಟಿಗಳನ್ನು ತೆಗೆದುಕೊಂಡು ಹೋಗುವುದು ಕಡ್ಡಾಯ.
ಪರೀಕ್ಷಾ ಅಕ್ರಮ ತಡೆಗಟ್ಟುವ ಸಲುವಾಗಿ ಪರೀಕ್ಷಾರ್ಥಿಗಳಿಗೆ ಉಡುಪು ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದಂತೆ ಎನ್‌ಟಿಎ ಹಲವು ನಿರ್ಬಂಧ ವಿಧಿಸಿದ್ದು, ಕಿವಿಯೋಲೆ, ರಿಂಗ್, ಮೂಗುತಿ, ಆಭರಣಗಳು, ಪೆಂಡೆಂಟ್, ಬ್ಯಾಡ್ಜ್ ಧರಿಸುವಂತಿಲ್ಲ. ವಿದ್ಯಾರ್ಥಿಗಳು ಶೂಗಳನ್ನು ಧರಿಸುವಂತಿಲ್ಲ. ಬದಲಿಗೆ, ದೊಡ್ಡ ಹೀಲ್ಸ್ ಇಲ್ಲದ ಸಾಮಾನ್ಯ ಚಪ್ಪಲಿ ಮತ್ತು ಸ್ಯಾಂಡಲ್‌ಗಳನ್ನು ಧರಿಸಿರಬೇಕು ಎಂದು ಸೂಚಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ