ಮಂಗಳೂರು:
ನೇತ್ರಾವತಿ ನದಿ ತುಂಬಿ ಹರಿಯುತ್ತಿದ್ದು, ಇದರಿಂದ ನೇತ್ರಾವತಿ ಸ್ನಾನಘಟ್ಟ ಭರ್ತಿಯಾಗಿದ್ದು ಧರ್ಮಸ್ಥಳಕ್ಕೆ ಆಗಮಿಸುವ ಭಕ್ತರಲ್ಲಿ ಸಂತಸ ಉಂಟುಮಾಡಿದೆ.
ಹೌದು, ಮುಂಗಾರು ಮಳೆ ಮತ್ತು ವಾಯುಭಾರ ಕುಸಿತದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಜೀವನದಿ ನೇತ್ರಾವತಿ ತುಂಬಿದೆ.
ಧರ್ಮಸ್ಥಳದಲ್ಲಿ ಕಂಡು ಕೇಳರಿಯದ ಬರಗಾಲ ಸ್ಥಿತಿ ಉಂಟಾಗಿ ಕುಡಿಯುವ ನೀರಿನ ಸಮಸ್ಯೆಯಾಗಿತ್ತು. ಇಷ್ಟು ದಿನ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗದೆ ಹಲವು ಕಡೆಗಳಲ್ಲಿ ನೀರಿಗೆ ತತ್ವರವುಂಟಾಗಿತ್ತು. ಅಡಿಕೆ, ತೆಂಗು, ಬಾಳೆ ತೋಟಗಳು ನೀರಿಲ್ಲದೆ ಒಣಗಿ ಹೋಗಿದ್ದವು. ನೇತ್ರಾವದಿ ನದಿ ನೀರಿನಲ್ಲಿ ಸಾಕಷ್ಟು ನೀರಿಲ್ಲದ್ದರಿಂದ ಧರ್ಮಸ್ಥಳಕ್ಕೆ ಭೇಟಿ ನೀಡುವವರು ತಮ್ಮ ಯಾತ್ರೆಯನ್ನು ಮುಂದೂಡುವಂತೆ, ಭಕ್ತರು ಪರಿಸ್ಥಿತಿಗೆ ಹೊಂದಿಕೊಳ್ಳುವಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಕರೆ ನೀಡಿದ್ದರು.
ಆದರೆ ಇದೀಗ ಭಾರೀ ಮಳೆಯಾಗಿ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಮೊದಲ ಮಳೆಗೆ ನೇತ್ರಾವತಿ ನದಿ ತುಂಬಿದ್ದು ಧರ್ಮಸ್ಥಳದ ಸ್ನಾನಘಟ್ಟದ ಬಳಿ ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ