ತುಮಕೂರು:

ತುಮಕೂರು ತಾಲೂಕು ಹೊನ್ನೇನಹಳ್ಳಿ ಎಂಬ ಗ್ರಾಮದ ಗದ್ದೆಯಲ್ಲಿ ಆಗತಾನೆ ಹುಟ್ಟಿದ್ದ ನವಜಾತ ಹೆಣ್ಣು ಶಿಶುವೊಂದು ಪತ್ತೆಯಾಗಿದೆ.
ಗ್ರಾಮಸ್ಥರೊಬ್ಬರು ಬಹಿರ್ದೆಸೆಗೆಂದು ತೆರಳಿದ್ದಾಗ ಮಗು ಅಳುವ ಶಬ್ದ ಕೇಳಿ ಸ್ಥಳಕ್ಕೆ ಹೋಗಿ ಮಗುವನ್ನು ನೋಡಿ ಗ್ರಾಮಕ್ಕೆ ತಂದಿದ್ದಾರೆ. ನಂತರ ಮಹದೇವಮ್ಮ ಎಂಬ ಮಹಿಳೆ ಮಗುವನ್ನ ಆರೈಕೆ ಮಾಡಿ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.
ಇಂದು ಬೆಳಗ್ಗೆ ಸುಮಾರು 6 ಗಂಟೆಯಲ್ಲಿ ಮಗು ಜನಿಸಿದ್ದು, ಮಗುವನ್ನ ಹಾಗೇ ಬೀಸಾಡಿ ಹೋಗಿರುವುದರಿಂದ ತೀವ್ರ ಶೀತಕ್ಕೆ ರಕ್ತ ಹೆಪ್ಪುಗಟ್ಟಿದೆ. ಅಲ್ಲದೇ ಮಗುವಿನ ಉಸಿರಾಟದಲ್ಲೂ ತೀವ್ರ ತೊಂದರೆ ಇದೆ ಎಂದು ಆರೈಕೆ ಮಾಡುತ್ತಿರುವ ನರ್ಸ್ ಹೇಳುತ್ತಿದ್ದಾರೆ.
ಈ ಕುರಿತು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಘಟನೆ ವಿಷಯ ತಿಳಿದ ಜಿಲ್ಲಾ ಮಕ್ಕಳ ಹಕ್ಕು ರಕ್ಷಣಾ ಸಮಿತಿಯವರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದೌಡಾಯಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








