ಹೊಸ ವರ್ಷ : ಮಧ್ಯರಾತ್ರಿ 2 ಗಂಟೆವರೆಗೆ ಪಾರ್ಟಿಗೆ ಅವಕಾಶ!!!

ಬೆಂಗಳೂರು:

     ಹೊಸ ವರ್ಷದ ಸಂಭ್ರಮಾಚರಣೆಗೆ ಸಜ್ಜಾಗಿ ನಿಂತಿರುವ ಬೆಂಗಳೂರು ಜನತೆಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಗುಡ್ ನ್ಯೂಸ್ ನೀಡಿದ್ದಾರೆ.

      ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ನಗರದಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

      ಹೊಸ ವರ್ಷದ ದಿನ ಮಧ್ಯರಾತ್ರಿ ಎರಡು ಗಂಟೆಯವರೆಗೆ ನೈಟ್ ಲೈಫ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಹೊಸ ವರ್ಷದ ದಿನದಂದು ಬಾರ್, ಪಬ್ ರೆಸ್ಟೊರೆಂಟ್, ಹೋಟೆಲುಗಳ ವ್ಯಾಪಾರದ ಸಮಯವನ್ನು ಮಧ್ಯರಾತ್ರಿ ಎರಡು ಗಂಟೆಯವರೆಗೆ  ವಿಸ್ತರಿಸಿದ್ದಾರೆ.  ಪ್ರತಿ ದಿನ ರಾತ್ರಿ ಒಂದು ಗಂಟೆಗೆ ಮುಚ್ಚುತ್ತಿದ್ದ ನೈಟ್ ಲೈಫ್ ಅವಧಿ, 31ರ ರಾತ್ರಿ ಒಂದು ಗಂಟೆ ವಿಸ್ತರಣೆಯಾಗಿದ್ದು, ರಾತ್ರಿ 2 ಗಂಟೆಯವರೆಗೆ ಎಂಜಾಯ್ ಮಾಡಬಹುದಾಗಿದೆ. ಪಾರ್ಟಿ ಪ್ರಿಯರು ಯಾವುದೇ ಭಯ ಆತಂಕವಿಲ್ಲದೆ, ಎರಡು ಗಂಟೆಯವರೆಗೆ ಪಾರ್ಟಿ ನಡೆಸಬಹುದಾಗಿದೆ.

      ಅಲ್ಲದೇ ಡಿ.31ರಂದು ಮಧ್ಯರಾತ್ರಿ 2ಗಂಟೆಯವರೆಗೂ ಮೆಟ್ರೋ ಸೇವೆ ವಿಸ್ತರಿಸಲು ಬಿಎಂಆರ್ ಸಿಎಲ್ ನಿರ್ಧರಿಸಿದ್ದು, ಪಾರ್ಟಿ ಮುಗಿಸಿ ಮೆಟ್ರೋದಲ್ಲಿ ಮನೆಗೆ ತೆರಳಬಹುದಾಗಿದೆ. ಈ ಮೂಲಕ ಪಾರ್ಟಿ ಪ್ರಿಯರಿಗೆ ಪೊಲೀಸ್ ಆಯುಕ್ತರು ಗುಡ್ ನ್ಯೂಸ್ ನೀಡಿದ್ದಾರೆ.

      ನಗರದೆಲ್ಲೆಡೆ 270 ಹೊಯ್ಸಳ ಸೌಲಭ್ಯ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಯಾವುದೇ ಸಮಸ್ಯೆಗಳ ಬಗ್ಗೆ ಕರೆ ಬಂದರೂ ಏಳು ನಿಮಿಷಗಳಲ್ಲಿ ಸ್ಥಳಕ್ಕೆ ತೆರಳುತ್ತೇವೆ. ಬ್ರಿಗೇಡ್ ರೋಡ್, ಎಂಜಿ.ರೋಡ್, ಕೋರಮಂಗಲದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದ್ದು, ‌1500 ಕ್ಕೂ ಸಿಸಿಟಿವಿ ಕ್ಯಾಮರ ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು.

      ಕುಡಿದು ಗಲಾಟೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕುಡಿದು ಹೆಣ್ಣು ಮಕ್ಕಳ ಮೇಲೆ ಬೀಳುವ ಪ್ರಕರಣಗಳನ್ನು ಸಹಿಸುವುದಿಲ್ಲ. ಅಂತಹವರನ್ನು ಕೂಡಲೇ ವಶಕ್ಕೆ ಪಡೆಯುತ್ತೇವೆ. ಓಲಾ, ಉಬರ್ ಸೇರಿದಂತೆ ವಿವಿಧ ಕಂಪೆನಿಗಳ ಕ್ಯಾಬ್ ಚಾಲಕರಿಗೆ ಸಹ ಎಚ್ಚರಿಕೆ ನೀಡಿದ ಆಯುಕ್ತರು ಒಬ್ಬರೇ ಮಹಿಳೆಯರು ಪ್ರಯಾಣಿಸುತ್ತಿರುವ ಸನ್ನಿವೇಶವನ್ನು ದುರ್ಬಳಕೆ ಮಾಡಿಕೊಳ್ಳಬಾರದು. ಕಾನೂನು ಉಲ್ಲಂಘಿಸಿರುವುದು ಕಂಡು ಬಂದರೆ ಕಂಪೆನಿಗಳು ಚಾಲಕರ ವಿರುದ್ದ ಸಹ ಕ್ರಮ ಕೈಗೊಳ್ಳಬೇಕು ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap