ತುಮಕೂರು:
ತುಮಕೂರು ಲೋಕಸಭಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಚತುಷ್ಪಥದ ರಸ್ತೆ ಅಭಿವೃದ್ಧಿಗೆ ಮಂಜೂರಾತಿ ದೊರೆತಿದ್ದು, ಇಂದು ಕಾಮಗಾರಿಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಚಾಲನೆ ನೀಡಿದರು.
ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಕ್ರಾಸ್ ನ ಮಲ್ಲಸಂದ್ರ-ತಿಪಟೂರು ವರೆಗಿನ 2700 ಕೋಟಿ ರೂ. ವೆಚ್ಚದ ರಾಷ್ಟ್ರೀಯ ಹೆದ್ದಾರಿ-206 ರ ಚತುಷ್ಪಥ ರಸ್ತೆ ಇದಾಗಿದೆ.
ಸಂಸದ ಎಸ್.ಪಿ.ಮುದ್ದಹನುಮೇಗೌಡ, ರಾಜ್ಯ ಕಾಸ್ಕಾರ್ಡ್ ಬ್ಯಾಂಕಿನ ಅಧ್ಯಕ್ಷ ಷಡಕ್ಷರಿ , ಜೆಡಿ.ಎಸ್.ಮುಖಂಡ ಲೋಕೇಶ್ವರ, ಡಿಸಿ ಡಾ.ರಾಕೇಶ್ ಕುಮಾರ್ ಕೆ, ಸಿಇಒ ಅನೀಸ್ ಕಣ್ಮಣಿ ಜಾಯ್, ಎಸಿ ಪೂರ್ವಿತಾ, ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ