ಮಂಡ್ಯ : ನಿಖಿಲ್ ಕುಮಾರಸ್ವಾಮಿ ‘ದಳ’ಪತಿ!!

0
27

ಮಂಡ್ಯ: 

      ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂದು  ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

      ನಗರದ ಸಿಲ್ವರ್ ಜುಬಿಲಿ ಪಾರ್ಕ್‍ನಲ್ಲಿ ಜೆಡಿಎಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಘೋಷಣೆ ಮಾಡಿದರು.  

      ನಿನ್ನೆಯಷ್ಟೇ ದೋಸ್ತಿಗಳ ನಡುವೆ 20-8 ಮಾದರಿಯಲ್ಲಿ ಸೀಟು ಹಂಚಿಕೆ ಫೈನಲ್‌ ಆಗಿತ್ತು. ಮತ್ತು ಈ ಸಮನ್ವಯದಂತೆ ಭಾರೀ ನಿರೀಕ್ಷೆಗೆ ಕಾರಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್‌ ಜೆಡಿಎಸ್‌ ಗೆ ಬಿಟ್ಟುಕೊಟ್ಟಿತ್ತು. ಇಂದು ಮಂಡ್ಯದಲ್ಲಿ ಜೆಡಿಎಸ್‌ ನ ಬೃಹತ್‌ ಸಾರ್ವಜನಿಕ ಸಮಾರಂಭದಲ್ಲಿ ಈ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿಯವರನ್ನು ಅಧಿಕೃತವಾಗಿ ಘೋಷಿಸುವೆಂದು ನಿರ್ಧಾರಗೊಂಡಿತ್ತು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

 

LEAVE A REPLY

Please enter your comment!
Please enter your name here