ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಖಚಿತ!!!

ಮೈಸೂರು:

      ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರ್ ಸ್ಪರ್ಧಿಸುವುದು ಖಚಿತವಾಗಿದೆ.

      ಪ್ರವಾಸೋದ್ಯಮ ಸಚಿವರಾದ ಸಾ.ರಾ. ಮಹೇಶ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ನಿಖಿಲ್ ಕುಮಾರ್ ಅವರೇ ಮೈತ್ರಿಕೂಟದ ಅಧಿಕೃತ ಅಭ್ಯರ್ಥಿ ಎಂದು ಘೋಷಿಸಿದ್ದಾರೆ.

       ಕಳೆದ 2 ದಿನಗಳಿಂದ ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಿಂದ ನಿಖಿಲ್ ಕುಮಾರ್ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿವೆ. ಆದರೆ, ಸಾ.ರಾ. ಮಹೇಶ್ ಅವರು, ಮಂಡ್ಯ ಕ್ಷೇತ್ರದಿಂದ ಮೈತ್ರಿಕೂಟದ ಅಧಿಕೃತ ಅಭ್ಯರ್ಥಿಯಾಗಿ ನಿಖಿಲ್ ಕುಮಾರ್ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದಾರೆ.

      ಈ ಮೂಲಕ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಜೆಡಿಎಸ್ ಭದ್ರಕೋಟೆಯಲ್ಲಿ ನಟಿ ಸುಮಲತಾ ವಿರುದ್ಧ ನಿಖಿಲ್​​​ ಸ್ಪರ್ಧಿಸಲಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ