ಬೆಂಗಳೂರು:
ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಅಟ್ಟಹಾಸ ಹೆಚ್ಚುತ್ತಿದ್ದು, ವೈರಸ್ ರಾಜ್ಯದಲ್ಲಿ ಹರಡದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೇರಳದಲ್ಲಿ ನಿಫಾ ವೈರಸ್ ಗೆ 12 ವರ್ಷದ ಬಾಲಕ ಬಲಿಯಾಗಿದ್ದು, ಇದೀಗ ಆತನ ಕುಟುಂಬದ 11 ಜನರಲ್ಲಿ ಕೂಡ ನಿಫಾ ಲಕ್ಷಣಗಳು ಕಂಡು ಬಂದಿವೆ. ಈ ನಡುವೆ ನಿಫಾ ಬಗ್ಗೆ ಎಚ್ಚರ ವಹಿಸುವಂತೆ ಕೇಂದ್ರ ಆರೋಗ್ಯ ಇಲಾಖೆ ತಂಡ ಕೇರಳ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದೆ.
ಈ ಎಲ್ಲಾ ಬೆಳವಣಿಗಳ ನಡುವೆ ರಾಜ್ಯದಲ್ಲಿಯೂ ನಿಫಾ ವೈರಸ್ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ನಿಫಾ ವೈರಸ್ ಬಗ್ಗೆ ತಜ್ಞರಿಂದ ವರದಿ ಕೇಳಿದ್ದೇನೆ. ವೈರಸ್ ಹರಡದಂತೆ ಮುಂಜಾಗೃತವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ ಎಂದು ತಿಳಿಸಿದರು.
ಸಿಎಂ ಸೂಚನೆ ಬೆನ್ನಲ್ಲೇ ಕೇರಳದ ಗಡಿ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸುತ್ತಮುತ್ತ ನಿಫಾ ಅಲರ್ಟ್ ಘೋಷಿಸಲಾಗಿದ್ದು, ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಆರೋಗ್ಯಾಧಿಕಾರಿಗಳಿಗೆ ಆದೇಶ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ