ಬೆಂಗಳೂರು:
ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿಗೆ ಕರ್ನಾಟಕ ಹೈಕೋರ್ಟ್ ಸಮನ್ಸ್ ನೀಡಿದೆ.
ನಿತ್ಯಾನಂದ ಸ್ವಾಮಿ ಜಾಮೀನು ರದ್ದತಿ ಕೋರಿ ದೂರುದಾರ ಲೆನಿನ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಏಕ ಸದಸ್ಯ ಪೀಠ, ಅರ್ಜಿ ವಿಚಾರಣೆ ವೇಳೆ ನಿತ್ಯಾನಂದನಿಗೆ ಎಷ್ಟು ಬಾರಿ ಸಮನ್ಸ್ ನೀಡಲಾಗಿದೆ. ಎಷ್ಟು ಬಾರಿ ವಿಚಾರಣೆಗೆ ಹಾಜರಾಗಿದ್ದಾನೆ ಎಂಬ ಪ್ರಶ್ನೆ ಹಾಕಿತ್ತು. ಇದಕ್ಕೆ ಉತ್ತರಿಸಿದ ಲೆನಿನ್ ಪರ ವಕೀಲರು, ನಿತ್ಯಾನಂದನಿಗೆ 45 ಬಾರಿ ಸಮನ್ಸ್ ನೀಡಲಾಗಿದೆ 45 ಬಾರಿ ವಿಚಾರಣೆಗೆ ನಿತ್ಯಾನಂದ ಗೈರು ಹಾಜರಾಗಿದ್ದಾರೆ. ನಿತ್ಯಾನಂದ ಭಾರತದಿಂದ ಪರಾರಿಯಾಗಿ ಒಂದೂವರೆ ವರ್ಷ ಕಳೆದಿದೆ ಎಂದು ಮಾಹಿತಿ ನೀಡಿದರು.
ನಂತರ ನಿತ್ಯಾನಂದ ಸ್ವಾಮೀಜಿಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕೋರಿದ ಅರ್ಜಿ ಸಂಬಂಧ ಸಿಐಡಿ ಹಾಗೂ ನಿತ್ಯಾನಂದ ಸ್ವಾಮೀಜಿಗೆ ಶುಕ್ರವಾರ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ