ಹಾಸನ:
ಕೊರೋನಾ ಸೋಂಕು ತೀವ್ರತೆ ಹಿನ್ನೆಲೆಯಲ್ಲಿ ಈ ಬಾರಿ ಹಾಸನಾಂಬೆ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಸ್ಪಷ್ಟಪಡಿಸಿದ್ದಾರೆ
ಹಾಸನಾಂಬೆ ದೇವಿ ದರ್ಶನಕ್ಕೆ ನವೆಂಬರ್ 5ರಿಂದ 17ರವರೆಗೆ ಅವಕಾಶ ನೀಡಲಾಗಿದೆ. ಆದರೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಈ ಬಾರಿ ಆನ್’ಲೈನ್ ನಲ್ಲಿ ಮಾತ್ರ ಭಕ್ತರಿಗೆ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಕೆಲವೆಡೆಗಳಲ್ಲಿ ಎಲ್.ಇ.ಡಿ ಪರದೆ ಹಾಕಿ ಸಾಮಾಜಿಕ ಅಂತರ ಸೇರಿದಂತೆ ಹಲವು ಮುಂಜಾಗೃತಾ ಕ್ರಮ ಕೈಗೊಂಡು ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದರು.
ಇನ್ನು ಈ ಬಾರಿ ಹಾಸನಾಂಬೆ ಉತ್ಸವ ಸಾಂಪ್ರದಾಯಿಕವಾಗಿ ನಡೆಯಲಿದ್ದು, ಮೊದಲ ದಿನ ನ.5ರಂದು ಹಾಸನಾಂಬೆ ದೇವಾಲಯದ ಬಾಗಿಲು ತೆರೆಯುವ ದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರಿಂದ ಉದ್ಘಾಟನೆ ನಡೆಯಲಿದೆ. ಮೊದಲ ಹಾಗೂ ಕೊನೇ ದಿನ ಆಹ್ವಾನಿತರಿಗೆ ಮಾತ್ರ ಹಾಸನಾಂಬೆ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ