ಮೈಸೂರು :
ಚಾಮುಂಡಿ ಬೆಟ್ಟದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಕ್ತರ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.
ಮಹಾಲಯ ಅಮಾವಾಸ್ಯೆ ಪ್ರಯುಕ್ತ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ಕೊರೊನಾ ಮುಂಜಾಗ್ರತಾ ಕ್ರಮವಾಗಿ ಚಾಮುಂಡಿ ಬೆಟ್ಟಕ್ಕೆ ಇಂದಿನಿಂದ ಮೂರು ದಿನಗಳ ಕಾಲ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಬೆಟ್ಟದ ಪಾದದ ಬಳಿ ಪೊಲೀಸರನ್ನ ನಿಯೋಜನೆ ಮಾಡಲಾಗಿದ್ದು, ಬ್ಯಾರಿಕೇಡ್ಗಳನ್ನು ಹಾಕಿ ರಸ್ತೆ ಬಂದ್ ಮಾಡಲಾಗಿದೆ. ಅಲ್ಲದೇ ಈಗಾಗಲೇ ಬೆಟ್ಟಕ್ಕೆ ಆಗಮಿಸಿದ ಭಕ್ತಾಧಿಗಳನ್ನು ಪೊಲೀಸರು ವಾಪಾಸ್ ಕಳುಹಿಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ