ಮೈಸೂರು :
ನಾಳೆ ಸಂಜೆಯಿಂದ ಚಾಮುಂಡಿ ಬೆಟ್ಟಕ್ಕೆ ಬರುವ ವಾಹನಗಳನ್ನು ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕೆ.ಟಿ. ಬಾಲಕೃಷ್ಣ ತಿಳಿಸಿದ್ದಾರೆ.
ಹೊಸ ವರ್ಷದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಾಳೆ ಸಂಜೆ ಡಿಸೆಂಬರ್ 31 ರ ರಾತ್ರಿ ಸಂಜೆ 7 ಗಂಟೆಯಿಂದ ತಾವರೆಕಟ್ಟೆ ಬಳಿ ಇರುವ ದ್ವಾರವನ್ನು ಹೊರತುಪಡಿಸಿ ಚಾಮುಂಡಿ ಬೆಟ್ಟದ ನಾಲ್ಕು ಗೇಟ್ ಗಳನ್ನು ನಿರ್ಬಂಧಿಸಲಾಗಿದೆ. ಚಾಮುಂಡಿ ಬೆಟ್ಟದ ಗ್ರಾಮಸ್ಥರಿಗೆ ಮಾತ್ರ ಮುಖ್ಯ ದ್ವಾರದಿಂದ ಪ್ರವೇಶ ಕಲ್ಪಿಸಲಾಗಿದೆ. ಸಾರ್ವಜನಿಕರಿಗೆ ವಾಹನ ಪ್ರವೇಶ ನಿಷೇಧಿಸಲಾಗಿದೆ.
ಇನ್ನು ಹೊಸ ವರ್ಷ ಆಚರಣೆ ವೇಳೆ ಸಾರ್ವಜನಿಕರ ಸ್ಥಳಗಳಲ್ಲಿ ಮದ್ಯಪಾನ ಸೇವಿಸುವುದು, ಅಸಭ್ಯವಾಗಿ ವರ್ತಿಸುವುದು, ಇತರರಿಗೆ ತೊಂದರೆ ಕೊಟ್ಟರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
