ಬೆಂಗಳೂರು:
ಹೊರ ರಾಜ್ಯಗಳಿಂದ ಬಂದವರಿಗೆ ಇನ್ನು ಮುಂದೆ ಉಚಿತ ಕೊರೋನಾ ಪರೀಕ್ಷೆ ಇರುವುದಿಲ್ಲ ಎಂದು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಹೊರ ರಾಜ್ಯಗಳಿಂದ ಬರುವವರಿಗೆ ರಾಜ್ಯ ಸರ್ಕಾರದ ವತಿಯಿಂದ ಉಚಿತವಾಗಿ ಕೊರೊನಾ ಪರೀಕ್ಷೆ ಮಾಡಿಸಲಾಗುತ್ತಿತ್ತು. ಇದೀಗ ಉಚಿತ ಸೌಲಭ್ಯ ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿ 8 ಖಾಸಗಿ ಲ್ಯಾಬ್ ಗಳನ್ನು ಗುರುತಿಸಲಾಗಿದ್ದು, ಇಲ್ಲಿ 650 ರೂ. ಪಾವತಿಸಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕಿದೆ.
ಇನ್ನು ರಾಜ್ಯದಲ್ಲಿ ಕ್ವಾರಂಟೈನ್ ನಿಯಮದಲ್ಲಿ ಕೆಲವು ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದ್ದು, ಹೊರರಾಜ್ಯದಿಂದ ಆಗಮಿಸಿದ ಎಲ್ಲರಿಗೂ ಕ್ವಾರಂಟೈನ್ ನಲ್ಲಿ ಇರಿಸದೇ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿರುವ ರಾಜ್ಯಗಳಿಂದ ಬಂದವರಿಗೆ ಮಾತ್ರ ಕ್ವಾರಂಟೈನ್ ಮಾಡಲು ನಿರ್ಧರಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ