ಬೆಂಗಳೂರು :
ಇನ್ನು ಮುಂದೆ ನೀವುಗಳು ಹೆಲ್ಮೆಟ್ ಧರಿಸದೆ ಪೆಟ್ರೋಲ್ ಹಾಕಿಸಲು ಬಂಕ್ ಗೆ ಹೋದರೆ ನಿರಾಸೆ ಎದುರಿಸಬೇಕಾಗುತ್ತದೆ.
ಹೌದು, ವಾಹನ ಸವಾರರ ಭದ್ರತೆ ಮತ್ತು ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ‘ಹೆಲ್ಮೆಟ್ ಇಲ್ಲದಿದ್ದರೆ, ಪೆಟ್ರೋಲ್ ಇಲ್ಲ’ ಎಂಬ ನಿಯಮವನ್ನು ಜಾರಿಗೆ ತರಲು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಜಾರಿಗೆ ತರಲು ಸಂಚಾರ ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಸದ್ಯ ದ್ವಿಚಕ್ರ ವಾಹನ ಸವಾರರಿಗೆ ಈ ಹೊಸ ನಿಯಮ ಅನ್ವಯವಾಗಲಿದ್ದು, ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸಿದರೆ ಪೆಟ್ರೋಲ್ ಸಿಗಲ್ಲ ಎಂದು ಟ್ರಾಫಿಕ್ ಪೊಲೀಸರು ಸೂಚಿಸಿದ್ದಾರೆ. ಒಂದು ವೇಳೆ ಯಾರಾದರೂ ಹೆಲ್ಮೆಟ್ ಧರಿಸದೇ ಇದ್ರೇ ಪೆಟ್ರೋಲ್ ನೀಡದಂತೆ ಸೂಚಿಸಿದ್ದಾರೆ. ಈ ನಿಯಮಕ್ಕೆ ಪೆಟ್ರೋಲ್ ಬಂಕ್ ಮಾಲೀಕರು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ