7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಬದಲು ಮೌಲ್ಯಮಾಪನ ಪರೀಕ್ಷೆ !!

ಬೆಂಗಳೂರು: 

      ಏಳನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ಬದಲಾಗಿ ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ ಮಾಡುವುದಕ್ಕೆ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

      ಈ ವಿಚಾರಕ್ಕೆ ಸ್ಪಷ್ಟನೆ ನೀಡಿರುವ ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್, ಈ ಹಿಂದೆ 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತಿತ್ತು. ಆದರೆ ಕಾರಣಾಂತರಗಳಿಂದ ಅದನ್ನು ತೆಗೆದು ಹಾಕಲಾಗಿದೆ. ಪಬ್ಲಿಕ್ ಪರೀಕ್ಷೆ ನಡೆಸುವ ಬದಲು, ಮಕ್ಕಳ ಕಲಿಕಾ ಮಟ್ಟ ಮೌಲ್ಯಾಂಕನ ಮಾಡೋದು ಈ ಪರೀಕ್ಷೆಯ ಉದ್ದೇಶವಾಗಿದೆ.  ಇನ್ನು ಪರೀಕ್ಷೆಯಲ್ಲಿ ಯಾವುದೇ ಮಕ್ಕಳನ್ನು ಅನುತ್ತೀರ್ಣ ಮಾಡುವುದಿಲ್ಲ ಎಂದೂ ಅವರು ತಿಳಿಸಿದ್ದಾರೆ.

      2019-20ನೇ ಸಾಲಿನ ಶೈಕ್ಷಣಿಕ ವರ್ಷದಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ಕುರಿತು ಸಾಕಷ್ಟು ಗೊಂದಲವಿತ್ತು. ಜೊತೆಗೆ ಹಲವು ಸಂಘಟನೆಗಳಿಂದ ಪಬ್ಲಿಕ್ ಪರೀಕ್ಷೆಗೆ ವಿರೋಧವೂ ವ್ಯಕ್ತವಾಗಿತ್ತು. ಆರ್​ಟಿಇ(ಶಿಕ್ಷಣದ ಹಕ್ಕು) ಕಾರ್ಯಕರ್ತರು ಕೂಡ ಈ ರೀತಿಯ ಪರೀಕ್ಷೆ ನಡೆಸದಂತೆ ಪ್ರತಿಭಟನೆ ನಡೆಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap