ಬೆಂಗಳೂರು :

ಕೊರೋನಾ ವೈರಸ್ ಸೋಂಕು ತಹಬದಿಗೆ ಬರದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೇ3.ರವರೆಗೆ ಲಾಕ್ ಡೌನ್ ನಿಂದ ವಿನಾಯಿತಿ ಇಲ್ಲ ಎನ್ನಲಾಗಿದೆ.
ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮೊನ್ನೆ ಘೋಷಣೆ ಮಾಡಿದ್ದ ಎಲ್ಲ ವಿನಾಯಿತಿ ಹಿಂದಕ್ಕೆ ಪಡೆಯುವುದಾಗಿ ಸರ್ಕಾರ ಹೇಳಿದೆ. ಕೃಷಿ ಹಾಗೂ ತೋಟಗಾರಿಕೆ ಚಟುವಟಿಕೆಗಳಿಗಷ್ಟೇ ವಿನಾಯಿತಿ ಇರಲಿದ್ದು, ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಹಾಗೆಯೇ 3 ತಿಂಗಳು ಉಚಿತ ಸಿಲಿಂಡರ್ ನೀಡುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ. ಇದೇ ವೇಳೆ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದು, ಉತ್ತರ ಪ್ರದೇಶ, ಕೇರಳ ಮಾದರಿಯಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯಿದೆಯ ಸುಗ್ರೀವಾಜ್ಞೆ ತರಲು ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








