ಬೆಂಗಳೂರು :
ಬಹು ದಿನಗಳಿಂದ ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಅವರು ಲ್ಯಾವೆಲ್ಲೆ ರೋಡ್‌ನಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಾರ್ನಾಡ್ ಅವರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನವೇ ನಡೆಯಲಿದ್ದು, ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡುವುದಿಲ್ಲ ಎಂದು ಕುಟುಂಬದ ಆಪ್ತರು ಖಚಿತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ನಿರ್ದೇಶಕ ಕೆ.ಎಂ. ಚೈತನ್ಯ, ಮಧ್ಯಾಹ್ನದ ಮೇಲೆ ಬೈಯ್ಯಪ್ಪನಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ. ಸಚಿವರು, ಗಣ್ಯರು ಯಾರೂ ಬರಬೇಡಿ, ಸಾರ್ವಜನಿಕ ದರ್ಶನ ಇರುವುದಿಲ್ಲ, ಯಾವುದೇ ವಿಧಿ ವಿಧಾನ ಇರುವುದಿಲ್ಲ. ಮಧ್ಯಾಹ್ನವೇ ನಾವು ಅಂತ್ಯಸಂಸ್ಕಾರಕ್ಕೆ ಸಮಯದ ನಿಗದಿ ಮಾಡುತ್ತೇವೆ. ಅಪಾರ್ಟ್ ಮೆಂಟ್ ಬಳಿ, ಸಾರ್ವಜನಿಕರು ರಾಜಕಾರಣಿಗಳು ಬರುವುದು ಬೇಡ. ಎಂದು ಪತ್ನಿ ಶಾರದಾ ಕಾರ್ನಾಡ್ ಮನವಿ ಮಾಡಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ