ಬೆಂಗಳೂರು:
ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ಟ್ವಿಟ್ಟರ್‌ನಲ್ಲಿ ಪ್ರಕಾಶ ರೈ ವಿರುದ್ಧ ಸಂಸದ ಪ್ರತಾಪ್ ಸಿಂಹ ಅವರು ಅವಹೇಳನಕಾರಿ ಹೇಳಿಕೆ ಪೋಸ್ಟ್ ಮಾಡಿರುವ ಆರೋಪದಲ್ಲಿ ನಟ ಪ್ರಕಾಶ್ ರೈ ಅವರು ದೂರು ದಾಖಲಿಸಿದ್ದರು.
ಇಂದು ನ್ಯಾಯಾಲಯಲ್ಲಿ ನಡೆದ ಪ್ರಕರಣದ ವಿಚಾರಣೆ ವೇಳೆ ಖುದ್ದು ಹಾಜರು ಆಗುವಂತೆ ಸಮನ್ಸ್ ನೀಡಲಾಗಿತ್ತು. ಆದರೆ, ಗೈರು ಹಾಜರಾದ ಹಿನ್ನೆಲೆಯಲ್ಲಿ ನಗರದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಲಯ ಮೈಸೂರು- ಸಂಸದ ಪ್ರತಾಪ್ ಸಿಂಹ ಅವರಿಗೆ ಶನಿವಾರ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿದೆ.
ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ವಿಚಾರಣೆಗಾಗಿ ಸಮನ್ಸ್ ಜಾರಿಗೊಳಿಸಿದ್ದರೂ ಪ್ರತಾಪ್ ಸಿಂಹ ಗೈರು ಹಾಜರಾಗಿದ್ದರು. ಹಾಗಾಗಿ ನ್ಯಾಯಾಲಯ ಎನ್‌ಬಿಡಬ್ಲ್ಯೂ ಜಾರಿಗೊಳಿಸಿ ವಿಚಾರಣೆಯನ್ನು ಮಾ.19ಕ್ಕೆ ಮುಂದೂಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ