ಬೆಂಗಳೂರಿನ 36 ಆಸ್ಪತ್ರೆಗಳಿಗೆ ನೋಟಿಸ್!!

ಬೆಂಗಳೂರು :

     ಸರ್ಕಾರದ ನಿಯಮ ಉಲ್ಲಂಘಿಸಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುತ್ತಿರುವ ಬೆಂಗಳೂರಿನ 36 ಖಾಸಗಿ ಆಸ್ಪತ್ರೆಗಳ ವಿರುದ್ಧ ನೋಟಿಸ್ ಜಾರಿ ಮಾಡಲಾಗಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

     ಈ ಸಂಬಂಧ ಟ್ವೀಟ್ ಮಾಡಿರುವ ಅವರು ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳು ಸರ್ಕಾರದ ನಿಯಮಾವಳಿ ಪ್ರಕಾರ ಶೇ.50ರಷ್ಟು ಹಾಸಿಗೆಗಳನ್ನು ಮೀಸಲಿಡುವುದು ಕಡ್ಡಾಯವಾಗಿದೆ.

     ಆದರೆ ಕೆಲವು ಆಸ್ಪತ್ರೆಗಳು ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುತ್ತಿರುವ ಹಿನ್ನೆಲೆ ಬೆಂಗಳೂರಿನ 36 ಆಸ್ಪತ್ರೆಗಳಿಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿದೆ.

      ಯಾವ ಆಸ್ಪತ್ರೆಗಳು ಕಾನೂನು ಉಲ್ಲಂಘನೆ ಮಾಡಿವೆಯೋ ಅಂಥವರ ಮೇಲೆ ಶಿಸ್ತು ಕ್ರಮ ಖಚಿತ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ