ಚಾಮರಾಜನಗರ:
ಹೃದಯಾಘಾತದಿಂದ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಅಧಿಕಾರಿಯೊಬ್ಬರು ಮತಗಟ್ಟೆಯಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಾಮರಾಜನಗರದ ಸುಲ್ತಾನ್ ಷರೀಫ್ ಬಳಿಯಿರುವ ಮತಗಟ್ಟೆ ಸಂಖ್ಯೆ 48 ರಲ್ಲಿ ನಿಯೋಜನೆಗೊಂಡಿದ್ದ ಮತಗಟ್ಟೆ ಅಧಿಕಾರಿ ಶಾಂತಮೂರ್ತಿ ಹೃದಯಾಘಾತದಿಂದ ಸಾವನ್ನಪ್ಪಿರುವ ದುರ್ದೈವಿ.
ಹೃದಯಾಘಾತಕ್ಕೊಳಗಾದ ಶಾಂತಮೂರ್ತಿಯವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಈ ಮಧ್ಯೆ ಚುನಾವಣಾ ಅಧಿಕಾರಿ ಮೃತಪಟ್ಟಿರುವುದು ದುಃಖಕರ ವಿಷಯವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ