ಬೆಂಗಳೂರು :
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ-2020 ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ.
ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಡಿಸಿಎಂ ಗೋವಿಂದ ಕಾರಜೋಳ, ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಶಾಸಕರಾದ ಎಸ್.ಎ. ರಾಮದಾಸ್, ನಾಗೇಂದ್ರ ಸೇರಿದಂತೆ ಹಲವರು ಸಿಎಂ ಬಿಎಸ್ ವೈಗೆ ಆಹ್ವಾನ ನೀಡಿದರು.
ಈ ಬಾರಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ದಸರಾ ಹಬ್ಬವನ್ನು ಸರಳವಾಗಿ ಆಚರಿಸಲು ಮುಂದಾಗಿದ್ದು, ಸಂಪ್ರದಾಯಕ್ಕೆ ಅಡ್ಡಿಯಾಗದೆ ಅರಮನೆ ಮತ್ತು ಚಾಮುಂಡಿ ಬೆಟ್ಟಕ್ಕೆ ಸೀಮಿತವಾಗಿ ಆಚರಿಸಲು ತೀರ್ಮಾನಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ