ಬೆಂಗಳೂರು :
ವಿಜಯಪುರದಲ್ಲಿ ಕೊರೋನಾದಿಂದ 69 ವರ್ಷದ ವೃದ್ಧರೊಬ್ಬರು ಸಾವನ್ನಪ್ಪಿದ್ದು ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ತಲ್ಲಣ ಸೃಷ್ಟಿಸಿದ್ದು, ಜನತೆ ಆತಂಕಗೊಂಡಿದ್ದಾರೆ. ರಾಜ್ಯದಲ್ಲಿ ಇಂದು ಮತ್ತೆ 11 ಮಂದಿಯಲ್ಲಿ ಮಾರಕ ಸೋಂಕು ಪತ್ತೆಯಾಗಿದ್ದು, 258ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಏತನ್ಮಧ್ಯೆ, ಕಿಲ್ಲರ್ ಕೊರೊನಾಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ.
ವಿಜಯಪುರ ಮೂಲದ 69 ವರ್ಷದ ವೃದ್ಧನಲ್ಲಿ ಕೆಲ ದಿನಗಳ ಹಿಂದೆ ಸೋಂಕಿನ ಲಕ್ಷಣ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ರಕ್ತದ ಮಾದರಿ ಗಂಟಲು ದ್ರವದ ಸ್ಯಾಂಪಲ್ ನ್ನು ಪರೀಕ್ಷೆಗೆ ಕಳುಹಿಸಿದ್ದ ವೇಳೆ ಸೋಂಕು ತಗುಲಿದ್ದು ದೃಢಪಟ್ಟಿತ್ತು. ಅಲ್ಲದೇ ನಿಗಾ ಇರಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ತೀವ್ರ ಉಸಿರಾಟದ ಸಮಸ್ಯೆ ಉಂಟಾದ ಕಾರಣ ವೃದ್ಧ ಬಲಿಯಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ