ನವದೆಹಲಿ:
ಪ್ರಜಾಪ್ರಭುತ್ವಕ್ಕೆ ಅತ್ಯಗತ್ಯವಾದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಡ್ಡಾಯವಾಗಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಇಂದು ಕೆಂಪು ಕೋಟೆಯಲ್ಲಿ 73ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ 6ನೇ ಬಾರಿಗೆ ಧ್ವಜರೋಹಣ ನೆರವೇರಿಸಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು, ಹಲವು ವಿಧದ ವ್ಯವಸ್ಥೆಗಳಲ್ಲಿ ಒಂದೇ ರಾಷ್ಟ್ರವಾಗಿರುವ ಭಾರತ, ಈಗ ಒಂದೇ ಚುನಾವಣೆಯ ಕುರಿತು ಮಾತನಾಡಬೇಕಿದೆ. ಈ ಬಗ್ಗೆ ಪ್ರಜಾಪ್ರಭುತ್ವದಲ್ಲಿ ಕೆಲವು ಸಮಯದ ವರೆಗೆ ಚರ್ಚೆ ನಡೆಯಬೇಕಿದೆ. ‘ಏಕ್ ಭಾರತ್, ಶ್ರೇಷ್ಠ ಭಾರತ್’ ಕನಸು ನನಸಾಗಿಸಲು ನಾವು ಇನ್ನೂ ಹೆಚ್ಚಿನದನ್ನು ಸಾಧಿಸಬೇಕಾಗಿದೆ ಎಂದು ಪ್ರಧಾನಿ ತಿಳಿಸಿದರು.
ಈ ಮೂಲಕ ದೇಶದಲ್ಲಿ ಏಕಕಾಲಕ್ಕೆ ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ನಡೆಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸುಳಿವು ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
