ಬೆಂಗಳೂರು : ಕೊರೊನಾಗೆ ಮತ್ತೊಬ್ಬ ಪೊಲೀಸ್​ ಬಲಿ!!

ಬೆಂಗಳೂರು :

      ಮಹಾಮಾರಿ ಕರೊನಾ ಸೋಂಕಿಗೆ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಬ್ಬ ಪೊಲೀಸ್ ಬಲಿಯಾಗಿದ್ದಾರೆ.

      ಕಲಾಸಿಪಾಳ್ಯದ 56 ವರ್ಷದ ಪೊಲೀಸ್ ಕಾನ್ಸ್ ಟೇಬಲ್. ಈ ಮೂಲಕ ಬೆಂಗಳೂರಿನಲ್ಲಿ ಕೊರೊನಾಗೆ ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಮೃತಪಟ್ಟಂತಾಗಿದೆ. ಅಲ್ಲದೇ 24 ಗಂಟೆಯಲ್ಲಿ ರಾಜಧಾನಿಯಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

      ವಿವಿ ಪುರಂನ ಎಎಸ್​ಐ ಅವರಿಗೂ ಕರೊನಾ ಸೋಂಕು ಇರುವುದು ದೃಢಪಟ್ಟಿತ್ತು. 3 ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 56 ವರ್ಷದ ಮುಖ್ಯಪೇದೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

      ಇದಲ್ಲದೇ ಬೆಂಗಳೂರು ಮೆಡಿಕಲ್ ಕಾಲೇಜಿನ ಡೀನ್ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

      ಶನಿವಾರ ಬೆಂಗಳೂರಿನಲ್ಲಿ ಕೊರೊನಾಗೆ  4 ಬಲಿಯಾಗಿದ್ದು, ಸಂಜೆ ವೇಳೆ ಮತ್ತೆ ನೂರಕ್ಕೂ ಹೆಚ್ಚು ಸೋಂಕು ದೃಢಪಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap