ನಾಲೆಗಳಿಗೆ ಕೆಆರ್​ಎಸ್ ನಿಂದ 1 ಸಾವಿರ ಕ್ಯೂಸೆಕ್ ನೀರು ಬಿಡುಗಡೆ!!

ಮಂಡ್ಯ :

      ಮಂಗಳವಾರ ರಾತ್ರಿ ಕೆಆರ್​ಎಸ್ ನಿಂದ 1 ಸಾವಿರ ಕ್ಯೂಸೆಕ್ ನೀರನ್ನು ನಾಲೆಗಳಿಗೆ ಹರಿಸಿದ್ದು, ಮಂಡ್ಯದ ರೈತರು ನಿಟ್ಟುಸಿರುಬಿಟ್ಟಂತಾಗಿದೆ.

     ಜಿಲ್ಲೆಯಲ್ಲಿ ನೀರಿಲ್ಲದೆ ಒಣಗುತ್ತಿರುವ ಬೆಳೆ ರಕ್ಷಣೆಗಾಗಿ ಕೆಆರ್ ಎಸ್ ನಿಂದ ಆಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ಕಳೆದೊಂದು ತಿಂಗಳಿನಿಂದ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರು.

ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ನೇತೃತ್ವದಲ್ಲಿ ಈ ವಿಚಾರವಾಗಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗಿತ್ತು.  ಮಧ್ಯರಾತ್ರಿ ಕೆಆರ್​ಎಸ್ ಆಣೆಕಟ್ಟೆಯಿಂದ ರೈತರ ಬೆಳೆಗಳಿಗೆ ನೀರು ಬಿಡಲಾಗಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ನೀರು ಹರಿಸಲಾಗಿದೆ. ಆರಂಭಿಕವಾಗಿ ನಾಲೆಗಳ ಮೂಲಕ ನೀರು ಹೊರಕ್ಕೆ ಬಿಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೀಗ ರೈತರು ಮೊಗದಲ್ಲಿ ಸಂತಸ ಮೂಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap