ರಾಜೀನಾಮೆಗೆ ಮುಂದಾದ 13 ಶಾಸಕರು: ‘ಮೈತ್ರಿ’ ಗೆ ಕಂಟಕ!!

ಬೆಂಗಳೂರು:

     ರಾಜ್ಯ ರಾಜಕಾರಣದಲ್ಲಿ ಬಹು ದೊಡ್ಡ ಆಪರೇಷನ್ ಕಮಲ ನಡೆಯುತ್ತಿದ್ದು, ಬರೋಬ್ಬರಿ 13 ಶಾಸಕರು ರಾಜೀನಾಮೆ ಸಲ್ಲಿಸಲು ಮುಂದಾಗಿದ್ದಾರೆ ಎಂಬ ವದಂತಿ ಹರಡಿದೆ.

     ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಅಮೆರಿಕ ಪ್ರವಾಸದಲ್ಲಿದ್ದು ಅವರು ವಾಪಸ್ ಬರುವ ಮುನ್ನವೇ ಮೈತ್ರಿ ಸರಕಾರಕ್ಕೆ ಕಂಟಕ ಎದುರಾಗಲಿದ್ದು, ಸಮ್ಮಿಶ್ರ ಸರಕಾದ 12-14 ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.

     ಮೊದಲನೆಯದಾಗಿ ಬಿಡುಗಡೆಯಾಗಿರುವ ಬಂಡಾಯಗಾರರ ಪಟ್ಟಿಯಲ್ಲಿ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ ಕುಮಟಳ್ಳಿ, ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್, ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್, ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್, ಕೆಆರ್ ಪುರಂ ಶಾಸಕ ಭೈರತಿ ಬಸವರಾಜು, ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರ, ಕೆಆರ್ ಪೇಟೆ ಶಾಸಕ ನಾರಾಯಣಗೌಡ, ಹುಣಸೂರು ಶಾಸಕ ಎಚ್ ವಿಶ್ವನಾಥ್, ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ, ಜಯನಗರ ಶಾಸಕಿ ಸೌಮ್ಯಾ ರೆಡ್ಡಿ, ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವವರ ಪಟ್ಟಿಯಲ್ಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

      ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ ವದಂತಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಅತೃಪ್ತ ಶಾಸಕರ ಮನವೊಲಿಸಲು ಮುಂದಾಗಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link