ತುಮಕೂರು : ಕೊರೊನಾ ಮಹಾಮಾರಿಗೆ ಮೂರನೇ ಬಲಿ!!

ತುಮಕೂರು :

      ಸೋಂಕಿತ ಮಹಿಳೆ ಜಿಲ್ಲೆಯ ಕೋವಿಡ್-19 ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಮತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 3 ಕ್ಕೇರಿದೆ.

      ಮಹಿಳೆಯು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಮೇ. 22 ರಂದು ತುಮಕೂರು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರ ಗಂಟಲು ದ್ರವವನ್ನು ಕೊರೊನಾ ಟೆಸ್ಟ್ ಗೆ ಕಳುಹಿಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ 9 ಗಂಟೆಗೆ ಮೃತಪಟ್ಟಿದ್ದಾರೆ.  
        ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 43 ಕ್ಕೆ ಏರಿಕೆಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap