ಮೈಸೂರು
ನಮ್ಮ ಸರ್ಕಾರ ಶಿಕ್ಷಣಕ್ಕೆ ಪ್ರಧಾನ ಆದ್ಯತೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮವಸ್ತ್ರ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು. ನಮ್ಮ ಸರ್ಕಾರ ಶಿಕ್ಷಣಕ್ಕೆ ಪ್ರಧಾನ ಆದ್ಯತೆ ನೀಡುತ್ತಿದೆ. ಶಿಕ್ಷಣ ತಜ್ಞರು, ಶಿಕ್ಷಣ ಸಮೂಹದೊಂದಿಗೆ ಮೌಲ್ಯಾಧಾರಿತ ಸಲಹೆ, ಸೂಚನೆಗಳನ್ನು ಪಡೆದು ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಕ್ರಮ ತೆಗೆದುಕೊಳ್ಳುವುದಾಗಿ ಸ್ಪಷ್ಟಪಡಿಸಿದರು.
ಶಾಲಾ ಮಕ್ಕಳ ಸಮವಸ್ತ್ರ ವಿತರಣೆಗೆ ಕೇಂದ್ರ ಸರ್ಕಾರದಿಂದ ಹಣ ಬರುವುದು ವಿಳಂಬವಾಗಿದ್ದು, ಇದರಿಂದ ಪೂರೈಕೆಯಲ್ಲಿ ವ್ಯತ್ಯಯವಾಗಿದೆ . ರಾಜ್ಯದಲ್ಲಿ ಅಭಾವ ಪರಿಸ್ಥಿತಿ ನಿಭಾಯಿಸಲು 16 ಸಾವಿರ ಕೋಟಿ ರೂ. ಪರಿಹಾರ ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗಿದೆ ಎಂದು ಕುಮಾರ ಸ್ವಾಮಿ ಹೇಳಿದರು.