ಬೆಂಗಳೂರು :
ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಪಿ.ರವಿಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ನಾಳೆ (ಡಿ.31) ಸೇವಾ ನಿವೃತ್ತಿ ಹೊಂದುತ್ತಿದ್ದಾರೆ. ಅವರಿಂದ ತೆರವಾಗಲಿರುವ ಸ್ಥಾನಕ್ಕೆ ರವಿಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ರವಿಕುಮಾರ್ ಅವರು ಕರ್ನಾಟಕ ಕೇಡರ್ ನ ಎರಡನೇ ಅತಿ ಹಿರಿಯ ಐಎಎಸ್ ಅಧಿಕಾರಿಯಾಗಿದ್ದಾರೆ. ಸೇವಾ ಹಿರಿತನದ ಜೊತೆಗೆ ಆಡಳಿತಾಧಿಕಾರಿಯಾಗಿ ಉತ್ತಮ ಗೌರವ, ಸ್ಥಾನಮಾನ, ವಿಶ್ವಾಸಗಳಿಸಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ