ಮೈಸೂರು :
ರಾಜ ವಂಶಸ್ಥೆ ಪ್ರಮೋದಾದೇವಿ ತಾಯಿ ಪುಟ್ಟಚಿನ್ನಮ್ಮಣಿ ನಿಧನದ ಹಿನ್ನೆಲೆಯಲ್ಲಿ ಮೈಸೂರು ಅರಮನೆಯ ವಿಜಯ ದಶಮಿ ಕಾರ್ಯಕ್ರಮಗಳನ್ನು ಅಕ್ಟೋಬರ್ 22 ಕ್ಕೆ ಮುಂದೂಡಲಾಗಿದೆ ಎನ್ನಲಾಗಿದೆ.
ಅರಮನೆಯಲ್ಲಿ ಸೂತಕದ ಛಾಯೆ ಆವರಿಸಿದ್ದರಿಂದಾಗಿ ಅರಮನೆಯಲ್ಲಿ ಇಂದು ರಾಜವಂಶಸ್ಥರಿಂದ ನಡೆಯಬೇಕಿದ್ದ ಉತ್ತರ ಪೂಜೆ, ಆಯುಧಗಳ ಪೂಜಾ ಕಾರ್ಯಕ್ರಮಗಳು ರದ್ದಾಗಿವೆ. ಬೆಂಗಳೂರು, ಚಾಮರಾಜನಗರ, ಮೈಸೂರಿನ ಜಟ್ಟಿಗಳಿಂದ ಬೆಳಗ್ಗೆ 10 ಗಂಟೆಗೆ ನಡೆಯಬೇಕಿದ್ದ ವಜ್ರಮುಷ್ಠಿ ಕಾಳಗ ಕುಸ್ತಿ ಪಂದ್ಯ ರದ್ದಾಗಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
