‘ಬಿಜೆಪಿಯಲ್ಲಿ ಮಾತ್ರ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ’- ಸಿಎಂ

ಬೆಂಗಳೂರು:

     ಬಿಜೆಪಿ ಪಕ್ಷದಲ್ಲಿ ಮಾತ್ರ ಸಾಮಾನ್ಯ ಕಾರ್ಯಕರ್ತರಿಗೂ ಅವಕಾಶ ಸಿಗುವುದು ಎಂದು ವರಿಷ್ಠರ ನಿರ್ಧಾರವನ್ನ  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮರ್ಥಿಸಿಕೊಂಡರು.

      ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾದ ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿಯವರ ನಾಮಪತ್ರ ಸಲ್ಲಿಕೆಯ ಮೊದಲ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಿಎಂ ಬಿಎಸ್ ವೈ ಮಾತನಾಡಿದರು.

      ಕೋರ್ ಕಮಿಟಿ ಸಭೆಯಲ್ಲಿ ಬೇರೆ ಹೆಸರುಗಳ ಬಗ್ಗೆ ಚರ್ಚೆ ಮಾಡಲಾಗಿತ್ತು. ಆದರೆ, ಸಾಮಾನ್ಯ ಕಾರ್ಯಕರ್ತರ ಹೆಸರು ಕೊಡಿ ಎಂದು ಸಂಸದೀಯ ಮಂಡಳಿ ಸೂಚನೆ ಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ಸಾಮಾನ್ಯ ಕಾರ್ಯಕರ್ತರ ಹೆಸರನ್ನು ಕಳುಹಿಸಿ ಕೊಡಲಾಗಿತ್ತು ಎಂದು ಸ್ಪಷ್ಟನೆ ನೀಡಿದ್ದಾರೆ.

       ರಾಜ್ಯಸಭೆಗೆ ಸ್ಪರ್ಧಿಸಲು ಪಕ್ಷದ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ನೀಡಿದ್ದಕ್ಕೆ ಪಕ್ಷದ ಹಿರಿಯರಿಗೆ ಧನ್ಯವಾದಗಳು. ಅವರು ರಾಜ್ಯಸಭೆಯಲ್ಲಿ ಉತ್ತಮ ಕೆಲಸ ಮಾಡುತ್ತಾರೆ ಎಂಬ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap