ಬೆಂಗಳೂರು :
ಬಿಎಂಟಿಸಿ ಬಸ್ ಗಳಲ್ಲಿ ಇನ್ಮುಂದೆ ಪ್ರಯಾಣಿಕರು ಪ್ಲಾಸ್ಟಿಕ್ ಕವರ್ ತರುವಂತಿಲ್ಲ ಎಂದು ಬೆಂಗಳೂರು ಮಹಾನಗರ ಪಾಲಿಕೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಶಿಖಾ ಆದೇಶ ಹೊರಡಿಸಿದ್ದಾರೆ.
ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿ ಮತ್ತು ಅಧಿಕಾರಿಗಳು ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಕರು ಪ್ಲಾಸ್ಟಿಕ್ ಕವರ್ ಗಳನ್ನು ತರುವುದು ಮತ್ತು ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಶಿಕಾ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಬಿಎಂಟಿಸಿ ಬಸ್ ನಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು ನಿಷೇಧಿಸಿರುವ ಬಿಎಂಟಿಸಿ ಆಡಳಿತ ಮಂಡಳಿ, ಪ್ಲಾಸ್ಟಿಕ್ ತರದಂತೆ ಪ್ರಯಾಣಿಕರಿಗೆ ಜಾಗೃತಿ ಮೂಡಿಸಲು ಚಾಲಕರಿಗೆ ಮತ್ತು ನಿರ್ವಾಹಕರಿಗೆ ಸುತ್ತೋಲೆ ಕಳುಹಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ