ಕಲಬುರಗಿ:
ವಾಕಿಂಗ್ ಮಾಡುತ್ತಿದ್ದವರ ಮೇಲೆ ಕಾರು ಹರಿದ ಪರಿಣಾಮ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೃತಪಟ್ಟ ವ್ಯಕ್ತಿಯ ಮೊಬೈಲ್ ನ್ನು ದೋಚಿ ಪರಾರಿಯಾಗಿರುವ ಘಟನೆ ವರದಿಯಾಗಿದೆ.
ರಾಮಮಂದಿರ ಬಳಿ ಎಂದಿನಂತೆ ಮೂವರು ವ್ಯಕ್ತಿಗಳು ವಾಕಿಂಗ್ ತೆರಳಿದ್ದರು. ಈ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಏಕಾಏಕಿ ಬಂದು ಮೂವರ ಮೇಲೆ ಹರಿದು ಹೋಗಿದೆ. ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರನ್ನು ಸ್ಥಳೀಯರು ಯುನೈಟೆಡ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಸಾವು ನೋವಿನ ನಡುವೆಯೂ ಕಿರಾತಕನೊಬ್ಬ ಮೃತನ ಮಗ ಎಂದು ಸ್ಥಳೀಯರನ್ನು ನಂಬಿಸಿ ಅವರ ಬಳಿಯಿದ್ದ ಹಣ ಹಾಗೂ ಮೊಬೈಲ್ ದೋಚಿ ಪರಾರಿಯಾಗಿದ್ದಾನೆ. ಸಾವಿನ ಮನೆಯಲ್ಲೂ ಕಳ್ಳತನ ಮಾಡಿ ತನ್ನ ನೀಚ ಬುದ್ಧಿ ತೋರಿಸಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಕಲಬುರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಾರನ್ನು ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ