ಚಿಕ್ಕಮಗಳೂರು
ಕುದುರೆಮುಖದಲ್ಲಿರುವ ಅರಣ್ಯ ಇಲಾಖೆಯ ಚೆಕ್ ಪೋಸ್ಟ್ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಹಾಕಿರುವ ಘಟನೆ ಇಂದು ಮುಂಜಾನೆ ವರದಿಯಾಗಿದೆ.
ನಕ್ಸಲ್ ಪೀಡಿತ ಪ್ರದೇಶವಾಗಿರುವ ಬಸರೀಕಲ್ ನ ಚೆಕ್‌ಪೋಸ್ಟ್ ಮೇಲೆ ಇಂದು ಬೆಳಗ್ಗಿನ ಜಾವ 3:30ರ ಸುಮಾರಿಗೆ ಈ ದಾಳಿ ನಡೆದಿದ್ದು. ಬಾಟಲಿಯೊಳಗೆ ಇಂಧನ ತೈಲವನ್ನು ತುಂಬಿ ಅದಕ್ಕೆ ಮರಳು ಬೆರೆಸಿ ಬೆಂಕಿ ಹಚ್ಚಿ ಚೆಕ್‌ಪೋಸ್ಟ್ ಮೇಲೆ ಎಸೆಯಲಾಗಿದೆ ಎಂದು ಸಿಬ್ಬಂದಿ ತಿಳಿಸಿದ್ದಾರೆ.ಘಟನಾ ಸ್ಥಳಕ್ಕೆ ಎಎಸ್ಪಿ ಶೃತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಸರೀಕಲ್ ಪ್ರದೇಶವು ನಕ್ಸಲ್ ಪೀಡಿತ ಪ್ರದೇಶವಾಗಿರುವುದರಿಂದ ಹೈಅಲರ್ಟ್ ಘೋಷಿಸಲಾಗಿದೆ. ಎಎನ್‌ಎಫ್ ಸಿಬ್ಬಂದಿ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ