ಬೆಂಗಳೂರು :
ರಾಜ್ಯ ಸರ್ಕಾರದಿಂದ ಪ್ಲಾಸ್ಮಾ ಬ್ಯಾಂಕ್ ಆರಂಭಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೊರನಾದಿಂದ ಗುಣಮುಖರಾದವರಿಂದ ಪ್ಲಾಸ್ಮಾ ಪಡೆದು ಕೊರೊನಾ ಸೋಂಕಿತರಿಗೆ ನೀಡಲು ರಾಜ್ಯದಲ್ಲಿ ಪ್ಲಾಸ್ಮಾ ಬ್ಯಾಂಕ್ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಖಾಸಗಿ ಸಹಭಾಗಿತ್ವದಲ್ಲಿ ಪ್ಲಾಸ್ಮಾ ಬ್ಯಾಂಕ್ ಆರಂಭಿಸಲು ನಿರ್ಧರಿಸಲಾಗಿದ್ದು, ಈ ಬಗ್ಗೆ ಇಂದಿನ ಟಾಸ್ಕ್ ಫೋರ್ಸ್ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.
ಇನ್ನು ವಿಶೇಷ ಏನೆಂದ್ರೆ, ಪ್ಲಾಸ್ಮಾ ದಾನ ಮಾಡಿದವರಿಗೆ 5 ಸಾವಿರ ಪ್ರೋತ್ಸಾಹ ಧನ ನೀಡುವುದಾಗಿ ಸರ್ಕಾರ ಘೋಷಿಸಿದೆ. ಇನ್ನು ಈವರೆಗೆ ಕೇವಲ 9 ಜನರು ಮಾತ್ರ ಪ್ಲಾಸ್ಮಾ ದಾನ ಮಾಡಿದ್ದು, ಹೆಚ್ಚೆಚ್ಚು ದಾನಿಗಳು ಮುಂದೆ ಬರಬೇಕು ಎಂದು ಸರ್ಕಾರ ಮನವಿ ಮಾಡಿಕೊಂಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ