ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದಲ್ಲಿ ವಿಸಿ ನಾಳೆಗೆ ಬಸ್ ಬಿದ್ದು, 23 ಜನ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು, ಭೀಕರ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಂಬನಿ ಮಿಡಿದಿದ್ದಾರೆ.
ಕರ್ನಾಟಕದ ಮಂಡ್ಯದಲ್ಲಿ ಬಸ್ ಅಪಘಾತ ತೀವ್ರವಾಗಿ ನೋವುಂಟು ಮಾಡಿದೆ. ಈ ಸಂಕಷ್ಟದ ಸಮಯದಲ್ಲಿ ಮೃತರ ಕುಟುಂಬಗಳಿಗೆ ದೇವರು ಧೈರ್ಯ ನೀಡಲಿ. ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಭಗವಂತನನ್ನು ಸ್ಮರಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
Deeply pained the bus accident in Karnataka’s Mandya. My thoughts are with the families of the deceased. May God give them strength in this hour of sadness: PM @narendramodi
— PMO India (@PMOIndia) November 24, 2018
ಕರಾಳ ಶನಿವಾರದ ಬಗ್ಗೆ ಟ್ವೀಟ್ ಮಾಡಿರೋ ರಾಹುಲ್ ಗಾಂಧಿ, ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಸೂಚಿಸಿದ್ದಾರೆ.
ಕರ್ನಾಟಕದ ಮಂಡ್ಯ ಜಿಲ್ಲೆಯಲ್ಲಿ ನಡೆದ ಭಯಾನಕ ಬಸ್ ಅಪಘಾತದಲ್ಲಿ 20 ಮಂದಿ ಮೃತಪಟ್ಟ ಸುದ್ದಿ ಕೇಳಿ ತುಂಬಾ ನೋವಾಗಿದೆ. ಮೃತರ ಕುಟುಂಬಗಳಿಗೆ ಸಾಂತ್ವನ ಹೇಳುತ್ತಿದ್ದೇನೆ ಹಾಗೂ ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಅಂತಾ ಬೇಡಿಕೊಳ್ಳುತ್ತೇನೆ ಅಂತಾ ಟ್ವೀಟ್ ಮಾಡಿದ್ದಾರೆ.
I'm sorry to hear about the terrible bus accident in Mandya district of Karnataka in which over 20 people are feared dead & many others injured.
I extend my deepest condolences to the families of the deceased & pray for the speedy recovery of the injured.
— Rahul Gandhi (@RahulGandhi) November 24, 2018
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ