ದೆಹಲಿ:
ದಕ್ಷಿಣ ಕೊರಿಯಾದ ಪ್ರತಿಷ್ಠಿತ ಸಿಯೋಲ್ ಶಾಂತಿ ಪ್ರಶಸ್ತಿಯಿಂದ ಬಂದ 2,00,000 ಡಾಲರ್ (ಭಾರತೀಯ ಕರೆನ್ಸಿಯಲ್ಲಿ ಅಂದಾಜು 1.40 ಕೋಟಿ) ಹಣವನ್ನ ಪ್ರಧಾನಿ ಮೋದಿ ನಮಾಮಿ ಗಂಗೆ ಯೋಜನೆಗೆ ನೀಡಿದ್ದಾರೆ.
ಪ್ರಶಸ್ತಿಯನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಇದು 130 ಕೋಟಿ ಭಾರತೀಯರಿಗೆ ಸಂದ ಗೌರವ ಎಂದು ನುಡಿದರು.
ಈ ಸಂದರ್ಭದಲ್ಲಿ ವ್ಯಾಪಾರ, ಹೂಡಿಕೆ, ರಕ್ಷಣೆ ಮತ್ತು ಭದ್ರತೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ದ್ವೀಪಕ್ಷೀಯ ಸಹಕಾರ ಹೆಚ್ಚಿಸುವ ನಿಟ್ಟಿನಲ್ಲಿ ಉಭಯ ನಾಯಕರ ನಡುವೆ ರಚನಾತ್ಮಕ ಮಾತುಕತೆ ನಡೆದು ಒಪ್ಪಂದಗಳಿಗೆ ಸಹಿ ಹಾಕಲಾಯಿತು. ಉಭಯ ದೇಶಗಳು 7 ಮಹತ್ವದ ಒಪ್ಪಂದಗಳಿಗೆ ಹಾಕಿ ದಾಖಲೆಗಳನ್ನು ವಿನಿಮಯ ಮಾಡಿಕೊಂಡವು.
ರಕ್ಷಣೆ, ಸ್ಟಾರ್ಟ್ ಅಪ್, ಮಾಧ್ಯಮ ಕ್ಷೇತ್ರದಲ್ಲಿ ಸಹಕಾರ ಸೇರಿದಂತೆ ಪ್ರಮುಖ ಏಳು ದಾಖಲೆಗಳಿಗೆ ಭಾರತ ಹಾಗೂ ದಕ್ಷಿಣ ಕೊರಿಯಾ ನಾಯಕರು ಸಹಿ ವಿನಿಮಯ ಮಾಡಿಕೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ.
1990ರಲ್ಲಿ ದಕ್ಷಿಣ ಕೋರಿಯಾ ಸ್ಥಾಪಿಸಿದ್ದ ಅಲ್ಲಿನ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ ಇದಾಗಿದ್ದು, ಸಿಯೋಲ್ ಪೀಸ್ ಪ್ರೈಜ್ ಫೌಂಡೇಷನ್ 2018 ರಲ್ಲಿ ಮೋದಿಗೆ ಈ ಪ್ರಶಸ್ತಿ ಘೋಷಣೆ ಮಾಡಿತ್ತು. ಎರಡು ದಿನಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿಗೆ ಇಂದು ದಕ್ಷಿಣ ಕೋರಿಯಾ ಸಿಯೋಲ್ ಪ್ರಶಸ್ತಿ ನೀಡಿ ಗೌರವಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ